ಆರ್ .ಟಿ. ನಗರ : ರಾಜ್ಯದಲ್ಲಿ ಅಝಾನ್ ಗೆ ವಿರೋಧ ವ್ಯಕ್ತಪಡಿಸಿ ಶ್ರೀ ರಾಮ ಸೇನೆ ಸೇರಿದಂತೆ ಕೆಲವೊಂದು ಹಿಂದುತ್ವ ಸಂಘಟನೆಗಳು ಭಜನೆ ಇತ್ಯಾದಿ ಮೂಲಕ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.
ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ. ನಿಯೋಗದಲ್ಲಿ ಶಾಸಕರಾದ ಎನ್.ಎ.ಹಾರಿಸ್, ನಝೀರ್ ಅಹ್ಮದ್ ಇದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ