ಮಂಗಳೂರು, ಮೇ 9: ಮನವಿ ನೀಡಲು ಕಚೇರಿಗೆ ಬರುವವರ ಜೊತೆ ಮಾತುಕತೆ ನಡೆಸುವುದು ಸಹಜವಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ಕಚೇರಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಆತಿಥ್ಯ ನೀಡಲಾಗಿದೆ ಎಂಬ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಮಳಲಿ ಮಸೀದಿ ವಿಚಾರವಾಗಿ ಚರ್ಚೆ ಮಾಡಲು ಪ್ರಮೋದ್ ಮುತಾಲಿಕ್ ಕಚೇರಿಗೆ ಬಂದಿದ್ದರು. ಆ ಪ್ರದೇಶವನ್ನು ಪ್ರವೇಶಿಸಲು ಅವರು ಅನುಮತಿ ಕೇಳಿದ್ದರು. ಮುತಾಲಿಕ್ ಮತ್ತವರ ಬೆಂಬಲಿಗರು ಮಳಲಿಗೆ ಭೇಟಿ ನೀಡುತ್ತಾರೆ ಅನ್ನುವ ಮಾಹಿತಿ ಇತ್ತು. ಮುತಾಲಿಕ್ ಅಲ್ಲಿಗೆ ಹೋದರೆ ಅಹಿತಕರ ಘಟನೆ ಉಂಟಾಗುವ ಸಂಭವ ಇತ್ತು. ಹಾಗಾಗಿ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಕಮಿಷನರ್ ತಿಳಿಸಿದ್ದಾರೆ.
ಅಪರಾಹ್ನ 2:30ರ ವೇಳೆಗೆ ಅವರು ಕಚೇರಿಗೆ ಆಗಮಿಸಿದ್ದರು. ನಾವು ಕಚೇರಿಯಿಂದ ಹೊರಡುವ ಸಮಯದಲ್ಲಿ ಆ ಫೋಟೋ ಕ್ಲಿಕ್ಕಿಸಲಾಗಿತ್ತು ಇದನ್ನೇ ನಿರ್ದಿಷ್ಟ ಪಕ್ಷ, ಸಂಘಟನೆಗೆ ಸೇರಿದವರು ಅಪಪ್ರಚಾರ ಮಾಡಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.
ಸಾಂದರ್ಭಿಕ ಚಿತ್ರವನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದನ್ನು ಶೇರ್ ಮಾಡಿದವರು ಪ್ರತಿನಿಧಿಸುವ ಪಕ್ಷದ ಪದಾಧಿಕಾರಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದು ಕಮಿಷನರ್ ಪ್ರತಿಕ್ರಿಯಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ