ಬೆಂಗಳೂರು: ಅಝಾನ್ ವಿರುದ್ಧ ಸಮರ ಸಾರಿರುವ ‘ಹಿಂದುತ್ವ’ ಭಯೋತ್ಪಾದಕರಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದ್ದು, ರಾಜ್ಯ ಸರಕಾರಕ್ಕೆ ತಲೆಬಿಸಿಯಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ದೇಗುಲ ಹಾಗೂ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಅಳವಡಿಕೆಗೆ ಮಾರ್ಗಸೂಚಿ ಪ್ರಕಟವಾಗಿದೆ. ಧ್ವನಿವರ್ಧಕ ಬಳಕೆಗೆ ಹಾಗೂ ಡೆಸಿಬಲ್ ಮಿತಿಯನ್ನು ಸೂಚಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 75 ಡೆಸಿಬಲ್ ರಾತ್ರಿ 70 ಡೆಸಿಬಲ್ ಸದ್ದು ಇರಬೇಕು. ವಾಣಿಜ್ಯ ಪ್ರದೇಶದಲ್ಲಿ ಬೆಳಗ್ಗೆ 65 ಡೆಸಿಬಲ್ ಹಾಗೂ ರಾತ್ರಿ 55 ಡೆಸಿಬಲ್ ಇರಬೇಕು. ಜನವಸತಿ ಪ್ರದೇಶದಲ್ಲಿ ಬೆಳಗ್ಗೆ 55 ಇದ್ರೆ ರಾತ್ರಿ 45 ಡೆಸಿಬಲ್ ಇರಬೇಕು. ನಿಶ್ಶಬ್ಧ ವಲಯದಲ್ಲಿ ಬೆಳಗ್ಗೆ 50 ಇದ್ರೆ ರಾತ್ರಿ 40 ಡೆಸಿಬಲ್ ಇರಬೇಕು. ಧ್ವನಿವರ್ಧಕ ಬಳಕೆಗೆ 15 ದಿನಗಳಲ್ಲಿ ಅನುಮತಿ ಪಡೆದಿರಬೇಕು. ಇಲ್ಲದಿದ್ರೆ ಸ್ಪೀಕರ್ ತೆಗೆಯುವಂತೆ ಸರ್ಕಾರ ಆದೇಶಿಸಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲಾಗಿದ್ದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ಧ್ವನಿವರ್ಧಕ ಬಳಸುವಂತಿಲ್ಲ ಅಂತ ಸರ್ಕಾರ ಆದೇಶಿಸಿದೆ.
ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ. ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ