ಎಸ್ಸೆಸ್ಸೆಲ್ಸಿ ತರಗತಿಯ ಪಾಠಗಳಲ್ಲಿ ತಳ ಸಮುದಾಯಗಳ ಹಕ್ಕುಗಳ ಪರವಾಗಿ ಹೋರಾಡಿದ ಮತ್ತು ಜಾತಿ ವ್ಯವಸ್ಥೆಯನ್ನು ಪೋಷಿಸುವ ಬ್ರಾಹ್ಮಣ್ಯದ ವಿರುದ್ಧ ಬಂಡೆದ್ದ ದಾರ್ಶನಿಕರ ಪಾಠ ಕೈಬಿಟ್ಟಿರುವುದು ಅಕ್ಷಮ್ಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ ಹೇಳಿದ್ದಾರೆ.
ಕೇರಳದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳ ಮೇಲೆ ಮೇಲ್ಜಾತಿ ಹಿಂದುಗಳು ನಡೆಸುತ್ತಿದ್ದ ಶೋಷಣೆ, ದಬ್ಬಾಳಿಕೆಗಳ ವಿರುದ್ಧ ಜನಜಾಗೃತಿಯನ್ನು ಮೂಡಿಸಿ ಅವರ ಹಕ್ಕುಗಳಿಗಾಗಿ ಪ್ರತಿರೋಧ ಚಳವಳಿಯನ್ನು ಹುಟ್ಟು ಹಾಕಿದವರು ನಾರಾಯಣ ಗುರುಗಳಾಗಿದ್ದರು. ಬ್ರಾಹ್ಮಣೇತರ ಸಮುದಾಯಗಳ ಮೇಲೆ ಹೇರಲಾಗಿದ್ದ ಸಾಮಾಜಿಕ ನಿರ್ಬಂಧಗಳು, ಸರ್ಕಾರಿ ರಂಗದಲ್ಲಿ ತಳ ಸಮುದಾಯಗಳ ಪ್ರಾತಿನಿಧ್ಯ ಮತ್ತು ಅವರ ಹಕ್ಕುಗಳಿಗೆ ಹೋರಾಡಿದ ಮತ್ತೊಬ್ಬ ದಾರ್ಶನಿಕರಾಗಿದ್ದವರು ಪೆರಿಯಾರ್.
ಸಂಘಪರಿವಾರದ ಶಕ್ತಿಗಳು ಬ್ರಿಟಿಷರೊಂದಿಗೆ ಕೈ ಜೋಡಿಸಿ ದ್ರೋಹ ಬಗೆಯುತ್ತಿದ್ದರೆ, ಭಾರತೀಯರ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದವರು ಭಗತ್ ಸಿಂಗ್. ಇಂತಹ ಸಮಾಜ ಸುಧಾರಕರೂ, ಅವಕಾಶ ವಂಚಿತ ಸಮುದಾಯಗಳ ಹಿತ ಚಿಂತಕರೂ ಮತ್ತು ಸಮಾನತೆಯ ಸಮಾಜ ನಿರ್ಮಾಣ ಹಾಗೂ ಸ್ವಾತಂತ್ರ್ಯದ ಹೋರಾಟದ ಸ್ಫೂರ್ತಿಯನ್ನು ತುಂಬುವ ಆದರ್ಶ ಪುರುಷರ ಪಾಠಗಳನ್ನು ಕೈಬಿಟ್ಟಿರುವುದು ಬಿಜೆಪಿ ಸರಕಾರವು ನಾಡಿನ ಜನತೆಗೆ ಮತ್ತು ಇತಿಹಾಸಕ್ಕೆ ಬಗೆಯುತ್ತಿರುವ ದ್ರೋಹವಾಗಿದೆ.
ಮೇಲ್ವರ್ಗದ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ, ನಾಡಿನ ಮೂಲ ನಿವಾಸಿಗಳ ಹಕ್ಕುಗಳನ್ನು ಎತ್ತಿ ಹಿಡಿದ ಕಾರಣಕ್ಕಾಗಿಯೇ ಸಂಘಪರಿವಾರವು ಜನಪರ ಆಡಳಿತಗಾರ, ದೇಶ ಕಂಡ ಅಪ್ರತಿಮ ರಾಜ ಟಿಪ್ಪು ಸುಲ್ತಾನ್ ರನ್ನು ಮತಾಂಧರನ್ನಾಗಿ ಬಿಂಬಿಸುತ್ತಾ ಬಂದಿದೆ. ಆರೆಸ್ಸೆಸ್-ಸಂಘಪರಿವಾರದ ದ್ವೇಷಪೂರಿತ ಸಿದ್ಧಾಂತ ಕೇವಲ ಮುಸ್ಲಿಮರಿಗೆ ಮಾತ್ರವಲ್ಲ, ಈ ದೇಶದ ಬಹುಸಂಖ್ಯಾತ ದಲಿತ ಮತ್ತು ಹಿಂದುಳಿದ ವರ್ಗಗಳಿಗೂ ತೀವ್ರ ಅಪಾಯಕಾರಿಯಾಗಿದೆ ಎಂಬುದನ್ನು ಈ ಸನ್ನಿವೇಶದಿಂದ ನಾವು ಗಮನಿಸಬಹುದಾಗಿದೆ.
ಬಿಜೆಪಿ ಸರಕಾರದ ಇಂತಹ ದುಷ್ಟ ಸಂಚುಗಳನ್ನು ನಾಗರಿಕ ಸಮುದಾಯವು ಪ್ರತಿರೋಧಿಸಬೇಕಾಗಿದೆ. ಹಾಗೆಯೇ ಬ್ರಾಹ್ಮಣ್ಯ ಚಿಂತನೆಗಳನ್ನು ಪ್ರಚಾರಪಡಿಸುವ ಹೆಡ್ಗೇವಾರ್ ರಂತಹ ಸಂಘಪರಿವಾರದ ಹಿನ್ನೆಲೆಯ ವ್ಯಕ್ತಿಗಳ ಪಾಠಗಳನ್ನು ಸೇರ್ಪಡೆಗೊಳಿಸಿ ವಿದ್ಯಾರ್ಥಿಗಳಲ್ಲಿ ದ್ವೇಷ ಬಿತ್ತುವ ಷಡ್ಯಂತ್ರಗಳನ್ನೂ ಗಟ್ಟಿ ಧ್ವನಿಯಲ್ಲಿ ವಿರೋಧಿಸಬೇಕಾಗಿದೆ ಎಂದು ಅಯ್ಯೂಬ್ ಅಗ್ನಾಡಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ