ಬೆಂಗಳೂರು: ಸಾಕಷ್ಟು ವಾದ-ವಿವಾದಗಳ ಬಳಿಕ ಪಠ್ಯ ಪರಿಷ್ಕರಣೆಗೆ ಇತಿಶ್ರೀ ಹಾಡಿದೆ. ಪಠ್ಯದ ವಿಚಾರದಲ್ಲಿ ಕೇಳಿ ಬಂದ ಆಕ್ಷೇಪಣೆಗಳಿಗೆ ಸರ್ಕಾರ ತಲೆ ಬಾಗಿದೆ. ಪ್ರಸ್ತುತ ಪಠ್ಯ ಪರಿಷ್ಕರಣೆ ಸಮಿತಿಯನ್ನ ವಿಸರ್ಜಿಸಲಾಗಿದೆ. ಆಕ್ಷೇಪಣೆಗಳನ್ನ ಪರಿಷ್ಕರಿಸಲು ತಾನು ಮುಕ್ತ ಅಂತ ಹೇಳಕೊಂಡಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸರ್ಕಾರ ಮತ್ತು ಬೌದ್ಧಿಕ ವಲಯದಲ್ಲಿ ಎದ್ದ ಪಠ್ಯದ ರಾದ್ಧಾಂತ, ಸೈದ್ಧಾಂತಿಕ ತಾಕಲಾಟಕ್ಕೆ ಕಾರಣವಾಗಿತ್ತು. ಇಡೀ ಬೆಳವಣಿಗೆ ಕಳೆದ ಒಂದು ತಿಂಗಳಿನಿಂದ ವಿವಾದದ ಸ್ವರೂಪ ಪಡೆದಿತ್ತು. ಈ ವಿವಾದ ಹಿಗ್ಗಿದಷ್ಟು ತನ್ನ ಇಮೇಜ್ಗೆ ಸಾಕಷ್ಟು ಧಕ್ಕೆ ಆಗ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಇಲ್ಲಿಗೆ ಈ ವಿವಾದಕ್ಕೆ ಅಂತ್ಯ ಹಾಡಲು ಮುಂದಾಗಿದೆ.
ಪ್ರಸ್ತುತ ಪಠ್ಯ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜಿಸಲಾಗಿದೆ ಅಂತ ಸಿಎಂ ಆದೇಶಿಸಿದ್ದಾರೆ. ಪ್ರಸ್ತುತ ಸಮಿತಿ ಪರಿಷ್ಕರಿಸುವ ಪಠ್ಯದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳಿದ್ದಲ್ಲಿ ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ ಅಂತ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಆಕ್ಷೇಪಕ್ಕೆ ಪರಿಷ್ಕರಿಸಲಾಗುವುದು. ಅದೇ ರೀತಿ ಆದಿಚುಂಚನಗಿರಿ ಶ್ರೀಗಳು, ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆ ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.
ಹಿಂದಿನ ಸರ್ಕಾರದ ಬರಗೂರು ರಾಮಚಂದ್ರ ಸಮಿತಿಯಲ್ಲಿ ಬಸವಣ್ಣ ಪಾಠ ಪರಿಷ್ಕರಣೆಯಾಗಿತ್ತು. ಇಂದಿನ ಸಮಿತಿ ಕೂಡ ಅದನ್ನ ಮುಂದುವರೆಸಿತ್ತು, ಆದರೆ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ಕೆಲ ಸ್ವಾಮೀಜಿಗಳ ಬಸವಣ್ಣನ ಪಠ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಸವಣ್ಣನ ಪಠ್ಯವನ್ನ ಯಾರ ಭಾವನೆಗೂ ದಕ್ಕೆಯಾಗದಂತೆ ಪರಿಷ್ಕರಣೆ ಮಾಡಲಾಗುವುದು. ನಾರಾಯಣ ಗುರು, ಭಗತ್ ಸಿಂಗ್ ಪಾಠ ಬಿಟ್ಟಿಲ್ಲ. ನಾಡಪ್ರಭು ಕೆಂಪೆಗೌಡರ ಪಠ್ಯ ಸೇರಿಸಲಾಗಿದೆ. ಒಂದರಿಂದ ಹತ್ತನೇ ತರಗತಿ ಭಾಷಾ ಪಠ್ಯಪುಸ್ತಕದಲ್ಲಿ 45 ಪಠ್ಯ ಪರಿಷ್ಕರಿಸಲಾಗಿದೆ. ಪ್ರಥಮ ಭಾಷೆ 33 ಪಾಠ/ಪದ್ಯಗಳು. ದ್ವೀತಿಯ ಭಾಷೆ 8 ಪಾಠ/ ಪದ್ಯ. ತೃತೀಯ ಭಾಷೆ 4 ಪಾಠ/ ಪದ್ಯ ಬದಲಾವಣೆ ಮಾಡಲಾಗಿದೆ.
ಬಿ.ಸಿ ನಾಗೇಶ್, ಶಿಕ್ಷಣ ಸಚಿವ
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)