ಮೂಡಬಿದ್ರೆ: ತಾಲೂಕಿನ ಪಡುಮಾರ್ನಾಡ್ ಗ್ರಾಮದ ಕಾಯಾರ್ ಕಟ್ಟೆ ಮುಹಿಯದ್ದೀನ್ ಜುಮಾ ಮಸ್ಜಿದ್ ಗುಂಡುಕಲ್ಲು ಇಲ್ಲಿನ ಆಡಳಿತಾಧಿಕಾರಿಯಾಗಿ ಮಾಜಿ ಸೈನಿಕ, ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕಿನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫಿ ಅವರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶ ನೀಡಿದೆ. ಆ ಹಿನ್ನೆಲೆಯಲ್ಲಿ ಅವರು ಜೂ.2 ರಂದೇ ಅಧಿಕಾರ ವಹಿಸಿಕೊಂಡಿದ್ದಾರೆ.
ಮುಹಮ್ಮದ್ ರಫಿ ಅವರು ಪ್ರಸ್ತುತ ಕಚ್ಚಿ ಮೆಮನ್ ಮಸ್ಜಿದ್ ಬಂದರ್ ಮಂಗಳೂರು ಹಾಗೂ ಝಕರಿಯಾ ಜುಮಾ ಮಸ್ಜಿದ್ ಬೆಳ್ಳಾರೆ ಸುಳ್ಯ ಇಲ್ಲಿನ ಆಡಳಿತಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾರೆ.ಈ ಹಿಂದೆ ಅವರು ಕಾಜೂರ್ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದರು. ಜಾಮಿಅ ಮಸ್ಜಿದ್ ಬೆಳ್ತಂಗಡಿ ಇಲ್ಲಿನ ಆಡಳಿತ ಸಮಿತಿ ಅಧ್ಯಕ್ಷರಾಗಿ ಸೇವೆಯಲ್ಲಿರುವ ಅವರು ಗುರುವಾಯನಕರೆ ಉರೂಸ್ ಸಮಿತಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಆಡಳಿತಾತ್ಮಕ ಅನುಭವ ಹೊಂದಿದವರಾಗಿದ್ದಾರೆ.
ಮುಹಮ್ಮದ್ ರಫಿ ಅವರು ಜೂ. 2 ರಂದು ಅಧಿಕಾರ ವಹಿಸುವ ಸಂದರ್ಭದಲ್ಲಿ ವಕ್ಫ್ ಜಿಲ್ಲಾ ಸಲಹಾ ಸಮಿತಿ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರ್, ಸಲಾಂ ಮದನಿ ಗುಂಡುಕಲ್ಲು ಹಾಗೂ ಜಮಾಅತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ