ಬೆಂಗಳೂರು: ಅರಬ್ ರಾಷ್ಟ್ರಗಳ ಪ್ರತಿಭಟನೆಗಳು ಫಲ ಕಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಮಾಡಿದ ಧರ್ಮನಿಂದೆಯ ಹೇಳಿಕೆಗಳ ವಿವಾದದ ನಂತರ ಪಕ್ಷದಲ್ಲಿ ದ್ವೇಷದ ಭಾಷಣವನ್ನು ತಡೆಯಲು ಬಿಜೆಪಿ ಕ್ರಮ ಕೈಗೊಂಡಿದೆ.
ರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಬಿಜೆಪಿ ನಾಯಕತ್ವವು ನಿಯಮಿತವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಾಯಕರ ಪಟ್ಟಿಯನ್ನು ಸಂಗ್ರಹಿಸಿದೆ. ಕಳೆದ ಎಂಟು ವರ್ಷಗಳಲ್ಲಿ 38 ನಾಯಕರು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಪಕ್ಷವು ಕಂಡುಹಿಡಿದಿದೆ. ಇವುಗಳಲ್ಲಿ 27 ಭಾಷಣಕಾರರಿಗೆ ಅಂತಹ ಭಾಷಣಗಳನ್ನು ಮರುಕಳಿಸದಂತೆ ಪಕ್ಷದ ನಾಯಕತ್ವ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತಲೆದೋರಿರುವ ಧರ್ಮ ದಂಗಲ್ಗೂ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ. ಈ ಸಂಬಂಧ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಬಿಜೆಪಿ ಹೈಕಮಾಂಡ್ ವಾರ್ನಿಂಗ್ ನೀಡಿದೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಳಿಕ ರಾಷ್ಟ್ರೀಯ ಬಿಜೆಪಿ ಅಲರ್ಟ್ ಆಗಿದೆ. ಧರ್ಮ ದಂಗಲ್ಗೆ ತೆರೆ ಎಳೆಯಲು ಬಿಜೆಪಿಯಲ್ಲಿ ಪ್ರಯತ್ನ ನಡೆದಿದೆ. ನೂಪುರ್ ಶರ್ಮಾ ಉಚ್ಚಾಟನೆ ಮೂಲಕ ರಾಜ್ಯಗಳ ಬಿಜೆಪಿ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆ ಮೂಲಕ ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್ ನೀಡಿದೆ.
ಧರ್ಮ ದಂಗಲ್ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸದಂತೆ ತಾಕೀತು ಮಾಡಿದೆ. ಮಸೀದಿ ಸೇರಿ ಇತರೆ ಧರ್ಮ ಸೂಕ್ಷ್ಮ ವಿಚಾರಗಳ ಕುರಿತು ಮಾತಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ.
ಸಬ್ ಕಾ ಸಾತ್ ಸಬ್ ಕಾ ವಿಕಾಸ್ ನಿಲುವಿಗೆ ಧರ್ಮ ದಂಗಲ್ ಅಡ್ಡಿಯಾಗಿದೆ. ಇನ್ಮುಂದೆ ಧರ್ಮ ಸೂಕ್ಷ್ಮ ವಿಚಾರಗಳ ಬಗ್ಗೆ ಪಕ್ಷದ ಮುಖಂಡರು, ವಕ್ತಾರರು ಹೇಳಿಕೆಗಳನ್ನು ಕೊಡಬಾರದು. ಕೆಲವು ಪ್ರಕರಣಗಳಲ್ಲಿ ಹೇಳಿಕೆ, ಅಭಿಪ್ರಾಯ ಕೊಡಲೇಬೇಕಾದ ಅನಿವಾರ್ಯತೆ ಇದ್ದರೆ ಅದರ ಬಗ್ಗೆ ಮೊದಲೇ ಗಮನಕ್ಕೆ ತಂದು ಅನುಮತಿ ಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದೆ.
ಹಿಜಾಬ್, ಹಿಂದೂ ದೇವಾಲಯ, ಮಸೀದಿ ಸೇರಿದಂತೆ ಅನೇಕ ವಿಚಾರಗಳಿಗಾಗಿ ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಧಾರ್ಮಿಕ ಸಂಘರ್ಷ ನಡೆಯುತ್ತಿದೆ. ಇದು ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಸಮರಕ್ಕೂ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ