ಅಬುಧಾಬಿ | ಬೇಸಿಗೆ ರಜೆಯಿಂದಾಗಿ ದಟ್ಟಣೆ ಹೆಚ್ಚಿರುವ ಕಾರಣ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ಗೆ ವರದಿ ಮಾಡಬೇಕು ಎಂದು ಗೋಏರ್ ಹೇಳಿದೆ.
ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ಊರಿಗೆ ತೆರಳದ ಕುಟುಂಬಗಳು, ಬೇಸಿಗೆ ರಜೆಗಾಗಿ ಶಾಲೆ ಮುಚ್ಚಿದ ಕಾರಣ ಗುಂಪು ಗುಂಪಾಗಿ ಹೊರಡುತ್ತಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದಾಗಿ ಅಬುಧಾಬಿ ಮತ್ತು ದುಬೈ ವಿಮಾನ ನಿಲ್ದಾಣಗಳು ಭಾರೀ ದಟ್ಟಣೆಯನ್ನು ಅನುಭವಿಸುತ್ತಿವೆ.
ರಜಾ ದಿನಗಳಲ್ಲಿ ಹೆಚ್ಚುತ್ತಿರುವ ನೂಕುನುಗ್ಗಲು ಕಾರಣ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ತಲುಪದಿರುವುದನ್ನು ತಪ್ಪಿಸಲು ಮತ್ತು ಪ್ರಯಾಣದ ವ್ಯವಸ್ಥೆಗಳನ್ನು ಪೂರ್ಣಗೊಳಿಸಲು ಬೇಗನೇ ಆಗಮಿಸುವಂತೆ ಸೂಚಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಕೋವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರ / ಮಾನ್ಯ RT-PCR ವರದಿಯನ್ನು ಏರ್ ಸುವಿಧ ಪೋರ್ಟಲ್ನಲ್ಲಿ (7) ಹೊರಡುವ ಮುಂಚಿತವಾಗಿ ಅಪ್ಲೋಡ್ ಮಾಡಬೇಕಾಗಿದೆ. ಅದರ ಪ್ರಿಂಟ್ ಔಟ್ ನ್ನು ಕೈಯಲ್ಲಿಡಬೇಕು.
ವ್ಯಾಕ್ಸಿನೇಷನ್ ತೆಗೆಯದ 5 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಮಕ್ಕಳು ನಿರ್ಗಮಿಸುವ 72 ಗಂಟೆಗಳ ಒಳಗೆ ಮಾನ್ಯವಾದ ಪಿಸಿಆರ್ ವರದಿಯನ್ನು ಪಡೆಯಬೇಕು. ನೇರ ಸಂಪರ್ಕ ಮತ್ತು ನವೀಕರಣಗಳಿಗಾಗಿ ಪ್ರಯಾಣಿಕರ ಸ್ಥಳೀಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು PNR ನಲ್ಲಿ ಅಪ್ಡೇಟ್ ಮಾಡಿರುವುದನ್ನು ಖಚಿತಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಯುಎಇಯಲ್ಲಿರುವ GoFirst ಕಚೇರಿಗಳು ಅಥವಾ ಸೇಲ್ಸ್ ತಂಡವನ್ನು ಸಂಪರ್ಕಿಸಿ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ