ಮಂಗಳೂರು, ಜೂನ್.30: ಇಂದು ರಾತ್ರಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಜುಲೈ 9 ಅರಫಾ ದಿನ ಹಾಗೂ ಜುಲೈ 10 ರಂದು ಬಕ್ರೀದ್ ಆಚರಿಸಲಾಗುವುದು ಎಂದು ಖಾಝಿಗಳು ಘೋಷಿಸಿದ್ದಾರೆ.
ಕಲ್ಲಿಕೋಟೆಯಲ್ಲಿ ಗುರುವಾರ ರಾತ್ರಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜುಲೈ 1ರಂದು ದುಲ್ಲಜ್ ತಿಂಗಳು ಆರಂಭವಾಗಲಿದೆ ಎಂದು ಗೌರವಾನ್ವಿತ ಉಳ್ಳಾಲ ಹಾಗೂ ದ.ಕ.ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಘೊಷಿಸಿದ್ದಾರೆ.
ಮಂಗಳೂರು ಹಾಗೂ ದ.ಕ.ಜಿಲ್ಲಾ ಸಂಯುಕ್ತ ಖಾಝಿಗಳಾದ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿರ್ಧರಿಸಿದ್ದಾಗಿ ಝೀನತ್ ಬಕ್ಷ್ ಮತ್ತು ಈದ್ಗಾ ಮಸೀದಿಯ ಪ್ರ. ಕಾರ್ಯದರ್ಶಿ ಹನೀಫ್ ಹಾಜಿಯವರು ತಿಳಿಸಿದ್ದಾರೆ.
ಇಂದು ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಈದುಲ್ ಅಝ್ಹಾ (ಬೆಲಿಯ ಪೆರ್ನಾಲ್)ಜುಲೈ 10 ರಂದು ಆಚರಿಸಲಾಗುವುದು ಎಂದು ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಸಂಯುಕ್ತ ಖಾಝಿಯವರಾದ ಝೈನುಲ್ ಉಲಮಾ ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ