ಕುವೈಟ್ ಸಿಟಿ: ಕುವೈತ್ನ ಗೃಹ ಸಚಿವಾಲಯವು (Interior Ministry of Kuwait) ಹೊಸ ವೀಸಾದಲ್ಲಿ ದೇಶಕ್ಕೆ ಆಗಮಿಸುವವರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ (Police Clearance Certificate) ಆನ್ಲೈನ್ ಪರಿಶೀಲನೆಯನ್ನು ಕಡ್ಡಾಯಗೊಳಿಸಲು ಸಿದ್ಧತೆ ನಡೆಸಿದೆ. ಮೊದಲ ಹಂತದಲ್ಲಿ ಭಾರತೀಯರಿಗೆ ಆನ್ಲೈನ್ ಪರಿಶೀಲನೆಯನ್ನು ಕಡ್ಡಾಯಗೊಳಿಸಲಾಗುವುದು ಎಂದಿರುವ ಗೃಹ ಸಚಿವಾಲಯದ ಮೂಲಗಳು, ಸೆಪ್ಟೆಂಬರ್ ವೇಳೆಗೆ ಎಲ್ಲಾ ದೇಶೀಯರಿಗೂ ಅನ್ವಯವಾಗಲಿದೆ ಎಂದು ಬಹಿರಂಗಪಡಿಸಿದೆ.
ಪ್ರಸ್ತುತ, ಹೊಸ ವೀಸಾದಲ್ಲಿ ಕುವೈಟ್ಗೆ ಬರುವವರು ವೀಸಾ ಸ್ಟಾಂಪಿಂಗ್ ಸಮಯದಲ್ಲಿ ಕುವೈತ್ ರಾಯಭಾರ ಕಚೇರಿ ಅಥವಾ ಕಾನ್ಸುಲೇಟ್ಗೆ ದೇಶದಿಂದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಅಥವಾ ಅಪರಾಧ ಸ್ಥಿತಿಯ ವರದಿಯನ್ನು ಸಲ್ಲಿಸಬೇಕು. ಕಾಗದದ ರೂಪದಲ್ಲಿ ಸಲ್ಲಿಸಲಾದ ಈ ಪ್ರಮಾಣಪತ್ರದ ದೃಢೀಕರಣವನ್ನು ಖಚಿತಪಡಿಸಿಕೊಳ್ಳಲು ಆನ್ಲೈನ್ ಪರಿಶೀಲನೆಯು ಕಡ್ಡಾಯವಾಗಿದೆ. ಕ್ಲಿಯರೆನ್ಸ್ ಪ್ರಮಾಣಪತ್ರದ ಡೇಟಾವನ್ನು ಕುವೈತ್ ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಅಧಿಕಾರಿಗಳ ಸಮನ್ವಯದೊಂದಿಗೆ ಕುವೈತ್ ಗೃಹ ಸಚಿವಾಲಯಕ್ಕೆ ವಿದ್ಯುನ್ಮಾನವಾಗಿ ರವಾನಿಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ