ಬೆಂಗಳೂರು, ಜು.26: ಆರ್ ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶಿಸಿದೆ.
2016-17ನೇ ಶೈಕ್ಷಣಿಕ ಸಾಲಿನಿಂದ ಆರ್ ಟಿಇ ಕಾಯ್ದೆ 2009ರ ಸೆಕ್ಷನ್ 12(1)(ಸಿ) ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಎಲ್ಕೆಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4ವರ್ಷ 10 ತಿಂಗಳು ಹಾಗೂ 1ನೇ ತರಗತಿಗೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳು ವಯೋಮಿತಿಯನ್ನು ನಿಗದಿಪಡಿಸಲಾಗಿತ್ತು.
2012ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೊಳಿಸಿದ್ದು, ಅದರಂತೆ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಟ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ಹಾಗೂ ಗರಿಷ್ಠ 7 ವರ್ಷಗಳಿಗೆ ನಿಗದಿಪಡಿಸಲಾಗಿತ್ತು. ಪರಿಷ್ಕರಿಸಿ 2020ರಲ್ಲಿ ಎಲ್ಕೆಜಿ ದಾಖಲಾತಿಗೆ 3 ವರ್ಷ 5 ತಿಂಗಳು ಹಾಗೂ ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.
ಈಗ ಹಿಂದಿನ ಆದೇಶ ಮತ್ತು ಸುತ್ತೋಲೆಗಳನ್ನು ಪರಿಶೀಲಿಸಿ ಹಿಂದಿನ ಆದೇಶಗಳನ್ನು ಹಿಂಪಡೆದು, 6 ವರ್ಷ ಪೂರ್ಣಗೊಂಡ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಸರಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ್ ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್