ಬೆಂಗಳೂರು: ಕೊಲೆಯಾದ ಫಾಝಿಲ್ ಹಾಗೂ ಮಸೂದ್ ಮನೆಗೆ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕೊಲೆಯಾದ ಫಾಝಿಲ್, ಮಸೂದ್ ಮನೆಗಳಿಗೆ ಬರುವಂತಹ ದಿನಗಳಲ್ಲಿ ಭೇಟಿ ಕೊಡುತ್ತೇನೆ ಎಂದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಾಗುತ್ತಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆ ಆಗುತ್ತೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೀತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡ್ತೇವೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ.
ಮಳೆಹಾನಿ ಕುರಿತು ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ, ಪರಿಹಾರದ ಬಗ್ಗೆ ಸೂಚನೆ ಕೊಡ್ತೀನಿ. ಮಂಕಿಪಾಕ್ಸ್ ಆತಂಕ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಸಭೆ ನಡೆಸಿ ಕಾಯಿಲೆ ಬಗ್ಗೆ ಮಾಹಿತಿ ಪಡೆದು, ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸಿ, ನಿರ್ಧಾರ ಮಾಡ್ತೀನಿ ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ