ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಇದರ ಸಭಾಂಗಣದಲ್ಲಿ 75 ನೇ ಸ್ವಾತಂತ್ರೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಅಸಯ್ಯದ್ ಶಮೀಮ್ ಅಲ್ ಬುಖಾರಿ ತಂಙಳ್ ಪ್ರಾರ್ಥನೆಗೆ ನೇತೃತ್ವ ನೀಡಿದರು.


ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭವ್ಯ ಪ್ರಜಾಪ್ರಭುತ್ವ ಭಾರತ ದೇಶದಲ್ಲಿ ಈ ದೇಶಕ್ಕಾಗಿ ಪ್ರಾಣ ತೊರೆದು ಬ್ರಿಟಿಷರ ವಿರುದ್ಧ ಹೋರಾಡಿದ ಹುತಾತ್ಮರನ್ನು ಸ್ಮರಿಸುವುದು ಭಾರತೀಯರಾದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕೋಶಾಧಿಕಾರಿ ಡಾ.ಹಸೈನಾರ್, ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ, ಇಬ್ರಾಹಿಂ ಮೋನು, ಉಸ್ಮಾನ್ ಹಾಜಿ, ಇಸ್ಮಾಯಿಲ್, ಹಾಫಿಳ್ ಶರೀಫ್ ಮುಸ್ಲಿಯರ್, ಅಬ್ಬಾಸ್ ಟಿಪ್ಪು ನಗರ, ಅಶ್ರಫ್ ತವಕ್ಕಲ್ ಹಾಗೂ ಇನ್ನಿತರ ಊರಿನ ಮಹನೀಯರು ದರ್ಸ್ ವಿದ್ಯಾರ್ಥಿಗಳು, ಮದರಸ ವಿದ್ಯಾರ್ಥಿಗಳು ಪಾಲ್ಗೊಂಡು ಬಹಳ ಯಶಸ್ವಿಯಾಗಿ ಜರಗಿತು. ಸೇರಿದ ಗಣ್ಯರನ್ನು ಅಬ್ದುರಝಾಖ್ ಸಅದಿ ಕೊಡಿಪ್ಪಾಡಿ ಸ್ವಾಗತಿಸಿ ವಂದಿಸಿದರು.
ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್