ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶವಿಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ ಮತ್ತು ರಂಜಾನ್ ಹಬ್ಬದ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶ ನೀಡಲಾಗಿದೆ. ಹಾಗೂ ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಹಾಗೂ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.
ಮೈದಾನದ ಮಾಲೀಕತ್ವ ಪ್ರಶ್ನೆ ಉದ್ಭವಿಸುವುದಿಲ್ಲ. ಹಿಂದೆಯೇ ಗೆಜೆಟ್ ನೋಟೀಫಿಕೇಶನ್ ಆಗಿದೆ. ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಮಕ್ಕಳು ಆಟ ಆಡಲು ಅನುಮತಿ ಇದೆ. ವರ್ಷಕ್ಕೆ ಎರಡು ಬಾರಿ ನಮಾಜ್ ಗೆ ಅನುಮತಿ ಇದೆ ಎಂದು ವಕ್ಫ್ ಬೋರ್ಡ್ ಪರ ವಕೀಲ ಮಾಹಿತಿ ನೀಡಿದರು.
ಮತ್ತೊಂದೆಡೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತನಾಡಿದ್ದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ ಹೈಕೋರ್ಟ್ ಆದೇಶದಂತೆ ಯಥಾಸ್ಥಿತಿ ಕಾಪಾಡುತ್ತೇವೆ. ಗಣೇಶೋತ್ಸವ ಸಂಬಂಧ 7 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಗಣೇಶೋತ್ಸವ ಮಾಡಬೇಡಿ ಎಂದು 2 ಸಂಘಟನೆ ಅರ್ಜಿ ಸಲ್ಲಿಸಿವೆ. ಹೈಕೋರ್ಟ್ ಆದೇಶ ಸಂಬಂಧ ಸರ್ಕಾರದ ಜತೆ ಚರ್ಚಿಸುತ್ತೇವೆ. ಈದ್ಗಾ ಮೈದಾನ ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆ ಎಂದರು.
ನ್ಯಾಯಾಲಯದ ಆದೇಶ ನಮಗೆ ಸಂತೋಷತಂದಿದೆ- ಶಾಫಿ ಸಅದಿ
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಬೆನ್ನಲೆ ಬೆಂಗಳೂರಿನಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಮುಹಮ್ಮದ್ ಶಾಫಿ ಸಆದಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನ್ಯಾಯಾಲಯದ ಆದೇಶ ನಮಗೆ ಸಂತೋಷತಂದಿದೆ. ಚಾಮರಾಜಪೇಟೆಯಲ್ಲಿ ಇರುವುದು ನಮ್ಮ ಈದ್ಗಾ ಮೈದಾನ. ಬಿಬಿಎಂಪಿ ಹಾಗೂ ನಮಗೂ ವ್ಯಾಜ್ಯ ಇತ್ತು. ಈಗಾಗಲೇ ಸುಪ್ರೀಂಕೋರ್ಟ್ ಆದೇಶ ಸಹ ಮಾಡಿತ್ತು. BBMP ಜಂಟಿ ಆಯುಕ್ತ ಸ್ವಲ್ಪ ಎಡವಟ್ಟು ಮಾಡಿಕೊಂಡಿದ್ದಾರೆ. ಮೈದಾನ ಸಂಬಂಧ ಈಗ ನ್ಯಾಯಾಲಯ ಆದೇಶ ಮಾಡಿದೆ ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ