ನವದೆಹಲಿ: ಹಲವು ರಾಜಕೀಯ ಆಯಾಮಗಳ ಬಳಿಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ತೀವ್ರ ವಿಷಾದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಇತ್ತೀಚೆಗೆ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು. ಈಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.
ಹಂಗಾಮಿ ಅಧ್ಯಕ್ಷರಿಗೆ ಸಲ್ಲಿಕೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ಗುಲಾಂ ನಬಿ ಆಜಾದ್, ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ತಮ್ಮ ಜೀವಿತದ ಅರ್ಧ ಅವಧಿಯನ್ನು ಪಕ್ಷದಲ್ಲಿಯೇ ಕಳೆದಿದ್ದೇನೆ ಎಂದಿರುವ ಗುಲಾಂ ನಬಿ ಆಜಾದ್, ಪಕ್ಷ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಇದ್ದ ಆಪ್ತ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದ ಸ್ಥಿತಿ ಯಾವ ಹಂತಕ್ಕೆ ತಲುಪಿದೆ ಎಂದರೆ, ಅಲ್ಲಿಂದ ಪಕ್ಷ ವಾಪಾಸ್ ಗೆಲುವಿನ ಹಾದಿಗೆ ಬರುವುದು ಸುಲಭವಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಇಚ್ಛೆ ಮತ್ತು ಸಾಮರ್ಥ್ಯ ಎರಡನ್ನೂ ಕಳೆದುಕೊಂಡಿದೆ. ಅಲ್ಲದೇ ರಾಹುಲ್ ಗಾಂಧಿಯವರ ವರ್ತನೆ ಚಿಕ್ಕ ಮಕ್ಕಳಂತೆ ಇದೆ. ಸ್ವಪಕ್ಷದಲ್ಲಿಯೇ ತಮ್ಮನ್ನು ಮೂಲೆಗುಂಪು ಮಾಡಿರುವ ಭಾವನೆ ತಮಗೆ ವ್ಯಕ್ತವಾಗಿದೆ ಎಂದು ಸೋನಿಯಾ ಗಾಂಧಿಗೆ ಸಲ್ಲಿಸಿರುವ ಸುಮಾರು ನಾಲ್ಕು ಪುಟಗಳುಳ್ಳ ರಾಜೀನಾಮೆ ಪತ್ರದಲ್ಲಿ ಗುಲಾಂ ನಬಿ ಆಜಾದ್ ಉಲ್ಲೇಖಿಸಿದ್ದಾರೆ.
ಜಮ್ಮು ಕಾಶ್ಮೀರ ರಾಜಕೀಯದ ಹಿರಿಯ ರಾಜಕಾರಣಿಯಾಗಿರುವ ಗುಲಾಂ ನಬಿ ಆಜಾದ್, ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದ ವ್ಯಕ್ತಿಯಾಗಿದ್ದಾರೆ. ಬಿಹಾರದ ಪ್ರಾದೇಶಿಕ ಪಕ್ಷವೊಂದು ಅವರಿಗೆ ರಾಜ್ಯಸಭಾ ಸ್ಥಾನವನ್ನು ನೀಡುವ ಆಫರ್ ಅನ್ನೂ ಇತ್ತೀಚೆಗೆ ನೀಡಿತ್ತು.ಆದರೆ, ಈ ಆಫರ್ ಅನ್ನು ಅವರು ತಿರಸ್ಕರಿಸಿದ್ದರು. ಕಾಂಗ್ರೆಸ್ ಪಕ್ಷದೊಂದಿಗೆ ನಾನು ರಾಜಕೀಯದಲ್ಲಿ ಇದ್ದಿದ್ದು ಇದು ಕೊನೆಯ ಬಾರಿ ಎಂದು ಈ ವೇಳೆ ಅವರು ಹೇಳಿದ್ದರು.
ಕಾಂಗ್ರೆಸ್‌ನ ಇನ್ನೊಬ್ಬ ಪ್ರಭಾವಿ ನಾಯಕ ಆನಂದ್ ಶರ್ಮ ಅವರು ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಮುಖ ಸ್ಥಾನಗಳಿಗೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಗುಲಾಂ ನಬಿ ಆಜಾದ್ ಪಕ್ಷವನ್ನೇ ತೊರೆದಿದ್ದಾರೆ. ಪಕ್ಷದಲ್ಲಿ ತಮಗೆ ದೊಡ್ಡ ಮಟ್ಟದಲ್ಲಿ ಅವಮಾನವಾಗಿದೆ ಎಂದು ಆನಂದ್ ಶರ್ಮ ಹೇಳಿದ್ದರು. ಅವರೂ ಕೂಡ ಪಕ್ಷವನ್ನು ತೊರೆಯುವ ಸಾಧ್ಯತೆ ದಟ್ಟವಾಗಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇದು ಅತಿದೊಡ್ಡ ಆಘಾತವಾಗಿದೆ.
ರಾಹುಲ್ ಗಾಂಧಿಯಿಂದ ಈ ಸ್ಥಿತಿ:
ಸುಮಾರು 45 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಗುಲಾಂ ನಬಿ ಆಜಾದ್ ಸೇವೆ ಸಲ್ಲಿಸಿದ್ದರು. ರಾಹುಲ್ ಗಾಂಧಿಯವರ ನಿರ್ಧಾರದಿಂದ ಪಕ್ಷದಿಂದ ದೊಡ್ಡ ಮಟ್ಟದಲ್ಲಿ ಹಿನ್ನಡೆಯಾಗಿದೆ. ನೀವು ಕೇವಲ ಪಕ್ಷದಲ್ಲಿ ಸಾಂಕೇಂತಿಕ ಅಧ್ಯಕ್ಷರು. ಆದರೆ, ಕಾಂಗ್ರೆಸ್ ಪಕ್ಷದ ಪ್ರಮುಖ ನಿರ್ಧಾರಗಳನ್ನು ರಾಹುಲ್ ಗಾಂಧಿ, ಅವರ ಪಿಎ ಹಾಗೂ ಭದ್ರತಾ ಸಿಬ್ಬಂದಿ ಮಾಡುತ್ತಿದ್ದಾರೆ ಎಂದು ಗುಲಾಂ ನಬಿ ಆಜಾದ್ ಸೋನಿಯಾ ಗಾಂಧಿಯವರನ್ನು ಉಲ್ಲೇಖಿಸಿ ಪತ್ರದಲ್ಲಿ ಬರೆದಿದ್ದಾರೆ. ರಾಹುಲ್ ಗಾಂಧಿ ತೆಗೆದುಕೊಳ್ಳುವ ಬಾಲಿಶ ನಿರ್ಧಾರಗಳಿಂದಲೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಆರೋಪ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ