ಬೆಳಗಾವಿ: ಮಡಿವಾಳೇಶ್ವರ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್‌ಕಾಲ್ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ
ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡುತ್ತಿದ್ದರು. ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಒಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಯಾವ ಕಾರಣ ನೀಡಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್