ಮಂಗಳೂರು: ಇಂಡಿಯನ್ ಗ್ರಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ನೇತೃತ್ವದಲ್ಲಿ ಕೋಝಿಕ್ಕೋಡ್ ಜಿಲ್ಲೆಯ ಕೈದಪ್ಪೊಯಿಲ್ ಎಂಬಲ್ಲಿ ಸುಮಾರು ನೂರೈವತ್ತು ಏಕರೆ ಭೂಮಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮರ್ಕಝ್ ನಾಲೇಜ್ ಸಿಟಿಯ ಮೊದಲ ಹಂತದ ಉದ್ಘಾಟನಾ ಸಮಾರಂಭವು ಇದೇ ಅಕ್ಟೋಬರ್ ಕೊನೆಯ ವಾರ ನಡೆಯಲಿದ್ದು ಆ ಬಗ್ಗೆ ಕರ್ನಾಟಕದಲ್ಲಿ, ವಿವಿಧ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಕಾರಂದೂರು ಮರ್ಕಝ್ ನಲ್ಲಿ ನಡೆದ ರಾಜ್ಯದ ಸುನ್ನೀ ಸಂಘಟನಾ ನಾಯಕರ ಸಭೆಯಲ್ಲಿ ನಿರ್ಧರಿಸಲಾಯಿತು.



ಬೆಂಗಳೂರು,ಮಂಗಳೂರು, ಕೊಡಗು ಮತ್ತು ಶಿವಮೊಗ್ಗಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ನಾಲೇಜ್ ಸಿಟಿಯ ಕಾರ್ಯ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ವಿವರಿಸಿ ಕೊಡಲಾಗುವುದು.
ಸದರಿ ಸಮಾವೇಶಗಳಲ್ಲಿ ಮರ್ಕಝ್ ನಾಲೇಜ್ ಸಿಟಿ ಅಧ್ಯಕ್ಷರಾದ ಸುಲ್ತಾನುಲ್ ಉಲಮಾ ಎ. ಪಿ.ಉಸ್ತಾದ್, ಸಯ್ಯಿದ್ ಅಲಿ ಬಾಫಖಿ ತಂಙಳ್, ಮಾನೇಜಿಂಗ್ ಡೈರೆಕ್ಟರ್ ಡಾ. ಅಬ್ದುಲ್ ಹಕೀಂ ಅಝ್ಹರಿ,ನಾಯಕರಾದ ಸಿ.ಮುಹಮ್ಮದ್ ಫೈಝಿ,ಸಯ್ಯಿದ್ ಮುಹಮ್ಮದ್ ತುರಾಬ್ ತಂಙಳ್, ಸಯ್ಯಿದ್ ಮುತ್ತನೂರ್ ತಂಙಳ್,ಡಾ.ಅಬ್ದುಲ್ ಸಲಾಂ, ಅಡ್ವಕೇಟ್ ತನ್ವೀರ್ ಮುಂತಾದವರು ಭಾಗವಹಿಸಲಿದ್ದಾರೆ.
ಕರ್ನಾಟಕದ ಯೋಜನಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು ಅಧ್ಯಕ್ಷರಾಗಿ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಕಾರ್ಯಾಧ್ಯಕ್ಷರಾಗಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ಉಪಾಧ್ಯಕ್ಷರಾಗಿ ಶಾಫಿ ಸಅದಿ ಬೆಂಗಳೂರು, ಪ್ರಧಾನ ಸಂಚಾಲಕರಾಗಿ ಅಶ್‌ರಫ್ ಸಅದಿ ಮಲ್ಲೂರು, ಸಂಚಾಲಕರಾಗಿ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ,
ಕೋಶಾಧಿಕಾರಿಯಾಗಿ ಹಾಜಿ ಬಿ.ಎಂ.ಮುಮ್ತಾಝ್ ಅಲಿ, ಸಂಯೋಜಕರಾಗಿ ಮರ್ಝೂಖ್ ಸಅದಿ ಕಾಮಿಲ್ ಸಖಾಫಿ ಕೋಝಿಕ್ಕೋಡ್ ಹಾಗೂ ಸದಸ್ಯರಾಗಿ ಕೆಪಿ ಹುಸೈನ್ ಸಅದಿ ಕೆಸಿ ರೋಡ್, ಜಿ.ಎಂ.ಕಾಮಿಲ್ ಸಖಾಫಿ,ಪಿ.ಎಂ.ಉಸ್ಮಾನ್ ಸಅದಿ ಪಟ್ಟೋರಿ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್,
ಕೆ.ಎಚ್.ಇಸ್ಮಾಯಿಲ್ ಸಅದಿ ಕಿನ್ಯ, ಹನೀಫ್ ಹಾಜಿ ಉಳ್ಳಾಲ್, ಅಬ್ದುಲ್ ಹಮೀದ್ ಬಜಪೆ, ಅಶ್‌ರಫ್ ಕಿನಾರಾ ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ