ಸುರತ್ಕಲ್,ಅ.28: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಇದೀಗ ಆರಂಭಿಸಿದ್ದಾರೆ.

ಸುರತ್ಕಲ್ ಟೋಲ್ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕುಮಾರ್ ನಿನ್ನೆ ಮನವಿ ಮಾಡಿದ್ದಾರೆ.


ಇನ್ನೊಂದೆಡೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ. ಆದರೆ ಪ್ರತಿಭಟನಾಕಾರರು ಈಗಾಗಲೇ 200 ಮೀಟರ್ ವ್ಯಾಪ್ತಿಯಿಂದ ಹೊರತಾದ ಪ್ರದೇಶದಲ್ಲಿ ತಮ್ಮ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಅದೇ ರೀತಿ ಇದೀಗ ಇಂದು ಮತ್ತೆ ಟೋಲ್ಗೇಟ್ ಬಳಿ ಹೋರಾಟಗಾರರು ನಿಷೇಧಾಜ್ಞೆ ಇರುವ ವ್ಯಾಪ್ತಿಯನ್ನು ಹೊರತುಪಡಿಸಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ವರದಿ: ಅದ್ದಿ ಬೊಳ್ಳೂರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ