ಅಬುಧಾಬಿ: ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯುಎಇಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಗಂಭೀರ ಅಪರಾಧಗಳಲ್ಲದ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭಿಸಲಿದೆ.ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ (Shaikh Muhammad Bin Zayed) ಅವರು 1530 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದರು. ವಿವಿಧ ಅಪರಾಧಗಳಿಗಾಗಿ ಜೈಲು ಶಿಕ್ಷೆಯನ್ನು ಅನುಭವಿಸಿದ ಕ್ಷಮಾಪಣೆ ಪಡೆದ ಕೈದಿಗಳ ಆರ್ಥಿಕ ಬಾಧ್ಯತೆಗಳನ್ನು ಇತ್ಯರ್ಥಗೊಳಿಸಲು ಶೈಖ್ ಮುಹಮ್ಮದ್ ಕರೆ ನೀಡಿದರು. ಕೈದಿಗಳಿಗೆ ಮರುಪರಿಶೀಲನೆ ಮತ್ತು ಹೊಸ ಜೀವನವನ್ನು ನಡೆಸಲು ದಾರಿ ಮಾಡಿಕೊಡುವುದಾಗಿದೆ ಬಿಡುಗಡೆಯ ಉದ್ದೇಶ ಎಂದು ಶೈಖ್ ಹೇಳಿದರು.
ಶಾರ್ಜಾ ಮತ್ತು ಫುಜೈರಾ ಆಡಳಿತಗಾರರು ಹೆಚ್ಚಿನ ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದರು. ಶಾರ್ಜಾ ಎಮಿರೇಟ್ನಲ್ಲಿ 333 ಮತ್ತು ಫುಜೈರಾದಲ್ಲಿ 153 ಕೈದಿಗಳನ್ನು ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೈಖ್ ಡಾ. ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿ, ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಫುಜೈರಾದ ಆಡಳಿತಗಾರ ಶೈಖ್ ಹಮದ್ ಬಿನ್ ಮುಹಮ್ಮದ್ ಅಲ್ ಶರ್ಕಿ ಕೂಡ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷ, ಯುಎಇ ಅಧಿಕಾರಿಗಳು ಹಬ್ಬದ ದಿನಗಳಲ್ಲಿ ಕೈದಿಗಳನ್ನು ಬಿಡುಗಡೆ ಮಾಡುತ್ತಾರೆ.ಭಾರತೀಯರು ಸೇರಿದಂತೆ ಅನೇಕ ವಲಸಿಗರು ಇದರ ಫಲಾನುಭವಿಗಳಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ