ನೆಲ್ಯಾಡಿ, ಎ.27. ಯಾರೂ ಇಲ್ಲದ ವೇಳೆ ಮನೆಯ ಒಳನುಗ್ಗಿರುವ ಕಳ್ಳರು ಮನೆಯಲ್ಲಿಟ್ಟಿದ್ದ ಹಣ ಹಾಗೂ ಒಡವೆಗಳನ್ನು ದೋಚಿದ ಘಟನೆ ನೆಲ್ಯಾಡಿಯಲ್ಲಿ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ.
ನೆಲ್ಯಾಡಿ ಬಸ್ ನಿಲ್ದಾಣ ಬಳಿಯ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಶೇಖ್ ಇಮಾಂ ಸಾಹೇಬ್ ಎಂಬವರು ಕುಟುಂಬ ಸಮೇತ ಬುಧವಾರದಂದು ಸುಳ್ಯದ ಸಂಬಂಧಿಕರ ಮನೆಗೆ ಮದುವೆಗೆಂದು ಹೋಗಿದ್ದರು.ಶುಕ್ರವಾರ ಸಂಜೆ ಮನೆಗೆ ಹಿಂದಿರುಗಿದಾಗ ಮನೆಯಲ್ಲಿಟ್ಟಿದ್ದ ಹಣ ಹಾಗು ಚಿನ್ನಗ ಸರವನ್ನು ಕಳ್ಳರು ದೋಚಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಇಮಾಂ ಸಾಹೇಬ್ ನೀಡಿದ ದೂರಿನಂತೆ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್, ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆಗಾಗಿ ಬೆರಳಚ್ಚು ತಜ್ಞರು ಮತ್ತು ಶ್ವಾನದಳವನ್ನು ಕರೆಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್