ಅಬುಧಾಬಿ: ಅಪಾರ್ಟ್ಮೆಂಟ್ಗಳಲ್ಲಿ ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ನಿವಾಸಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಮುಂದಿನ ವರ್ಷ ವ್ಯಾಪಕ ತಪಾಸಣೆ ಆರಂಭಿಸಲಾಗುವುದು. ನಿಯಮ ಉಲ್ಲಂಘಿಸುವವರಿಗೆ ಮಿಲಿಯನ್ ದಿರ್ಹಮ್ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಬುಧಾಬಿ ಪುರಸಭೆ ಮತ್ತು ಸಾರಿಗೆ ಇಲಾಖೆ The Department of Municipalities and Transport (DMT) ಅಪಾರ್ಟ್ಮೆಂಟ್ಗಳಿಗೆ ಎಚ್ಚರಿಕೆ ನೀಡಿದೆ. ‘ನಿಮ್ಮ ಮನೆ, ನಿಮ್ಮ ಜವಾಬ್ದಾರಿ’ ಎಂಬ ಅಭಿಯಾನವನ್ನೂ ಆರಂಭಿಸಲಾಗಿದೆ. (launched the ‘Your home, your responsibility’awareness campaign)
ಮುಂದಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ ನಗರದ ಅಪಾರ್ಟ್ಮೆಂಟ್ಗಳನ್ನು ಪರಿಶೀಲಿಸಲಾಗುವುದು. ಉಲ್ಲಂಘಿಸುವವರು ದೊಡ್ಡ ದಂಡವನ್ನು ಪಾವತಿಸಬೇಕಾಗುತ್ತದೆ.
ಕೆಲವು ಅಪಾರ್ಟ್ಮೆಂಟ್ಗಳು ಮತ್ತು ಕೊಠಡಿಗಳಲ್ಲಿ ಮಿತಿಮೀರಿದ ಜನಸಂದಣಿಯು ಭದ್ರತೆಗೆ ಬೆದರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಠಡಿಗಳನ್ನು ಬಾಡಿಗೆಗೆ ಪಡೆದವರು ಕಾನೂನುಬಾಹಿರವಾಗಿ ಇತರರಿಗೆ ನೀಡಲು ಅನುಮತಿಸುವುದಿಲ್ಲ.
ಈ ಅಭಿಯಾನವು ಅಬುಧಾಬಿ ನಾಗರಿಕ ರಕ್ಷಣಾ ಇಲಾಖೆಯ (the Abu Dhabi Civil Defense Authority) ಸಹಯೋಗದೊಂದಿಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಅಪಾರ್ಟ್ಮೆಂಟ್ಗಳಲ್ಲಿ ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ಜನರನ್ನು ಬಿಡಬೇಡಿ ಎಂದು ಅಧಿಕಾರಿಗಳು ನಿವಾಸಿಗಳು ಮತ್ತು ರಿಯಲ್ ಎಸ್ಟೇಟ್ ಮಾಲೀಕರಿಗೆ ಸೂಚಿಸಿದ್ದಾರೆ. ಅಬುಧಾಬಿಯ ವಿವಿಧ ಪುರಸಭೆಗಳ ಅಡಿಯಲ್ಲಿ ತಪಾಸಣೆ ಅಭಿಯಾನವನ್ನು ನಡೆಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ