ಸುರತ್ಕಲ್: ವ್ಯಕ್ತಿಯೋರ್ವರಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಶನಿವಾರ(ಡಿ.24) ಸಂಜೆ ಸುರತ್ಕಲ್(Suratkal) ಸಮೀಪದ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಜಲೀಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.’ಲತೀಫಾ ಸ್ಟೋರ್’ ಎಂಬ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ.
ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ