ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೊಂಡು ಪದೇಪದೇ ಕೊಲೆ,ಆಕ್ರಮಣ,ನೈತಿಕ ಪೋಲಿಸ್ ಗಿರಿ ನಿರಂತರವಾಗಿ ನಡೆಯುತ್ತಿದೆ. ಮುಸ್ಲಿಂ ಯುವಕರ ಮೇಲೆ ದೌರ್ಜನ್ಯ, ಪೊಲೀಸ್ ಅಧಿಕಾರಿಗಳ ದರ್ಪ, ಕೋಮುವಾದಿಗಳ ಅಟ್ಟಹಾಸ ಮಿತಿ ಮೀರುತ್ತಿದೆ.
ನ್ಯಾಯ ನೀಡಬೇಕಾದ ಅಧಿಕಾರಿಗಳು ಇದರ ಕುರಿತು ಕಾಳಜಿ ವಹಿಸದೆ ಒಂದು ಸಮುದಾಯವನ್ನು ನ್ಯಾಯದ ವಿಷಯದಲ್ಲಿ ಕಡೆಗಣಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ.
ಈ ವಿಷಯವನ್ನು ಪ್ರತಿಪಾದಿಸಿ ನ್ಯಾಯಕ್ಕಾಗಿ ಸುನ್ನಿ ಸಂಘಟನೆಗಳ ವತಿಯಿಂದ ಹಕ್ಕೊತ್ತಾಯ ಮಾಡುವ ಬೃಹತ್ ಪ್ರತಿಭಟನೆ ನಾಳೆ ಮಧ್ಯಾಹ್ನ 3:00 ಗಂಟೆಗೆ ಮಂಗಳೂರಿನಲ್ಲಿ ನಡೆಯುವಾಗ ನ್ಯಾಯ ಮತ್ತು ಶಾಂತಿಯನ್ನು ಬಯಸುವ ಎಲ್ಲರೂ ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು SYS ಮಂಗಳೂರು ಸೆಂಟರ್ ಅಧ್ಯಕ್ಷರಾದ ಕೆ.ಸಿ.ಎಣ್ಮೂರು ಹಾಗೂ ಪ್ರಧಾನ. ಕಾರ್ಯದರ್ಶಿ ಹಸನ್ ಪಾಡೇಶ್ವರ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್