ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಮೂವತ್ತನೇ ವರ್ಷಾಚರಣೆಯು ಜನವರಿ 24 ರಂದು ಶಿವಮೊಗ್ಗದಲ್ಲಿ ಉದ್ಘಾಟನೆಗೊಳ್ಳಲಿದ್ದು, ಇದರ ಅಂಗವಾಗಿ ಹಮ್ಮಿಕೊಂಡ ‘ತವಸ್ಸುಲ್ ಡೇ’ ಕಾರ್ಯಕ್ರಮಕ್ಕೆ ಉಳ್ಳಾಲ ಸಯ್ಯದ್ ಮದನಿ ಮಖಾಂ ಶರೀಫ್ ಝಿಯಾರತ್ನೊಂದಿಗೆ ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ. ಝೈನೀ ಕಾಮಿಲ್ ಅಧಿಕೃತವಾಗಿ ಚಾಲನೆ ನೀಡಿದರು.

ರಾಜ್ಯದ ಎಲ್ಲ ಸೆಂಟರ್ಗಳಲ್ಲಿ ಮಹಾತ್ಮರ ಮಖಾಂ ಝಿಯಾರತ್ಗಳು ಹಾಗೂ ಬ್ರಾಂಚ್ ಮಟ್ಟದಲ್ಲಿ ಸ್ಥಳೀಯ ಖಬರ್ಸ್ಥಾನಗಳಲ್ಲಿ ಸಾಮೂಹಿಕ ಝಿಯಾರತ್ ನಡೆಸುವ ಕಾರ್ಯಕ್ರಮ ಇದಾಗಿದ್ದು ಜನವರಿ ಒಂದು ಬೆಳಗ್ಗೆಯಿಂದ ಸಾಯಾಂಕಾಲ ತನಕ ಸಮಯಾವಕಾಶ ನೀಡಲಾಗಿದೆ.
ಉಳ್ಳಾಲ ಸಯ್ಯಿದ್ ಮದನಿ ಮಖಾಂ, ಮುಹ್ಯಿದ್ದೀನ್ ಬಾವಾ ಮಖಾಂ ಹಾಗೂ ಶೈಖುನಾ ಅಹ್ಮದ್ ಬಾವಾ ಉಸ್ತಾದ್ ಮಖಾಂಗಳಲ್ಲಿ ಝಿಯಾರತ್ ಬಳಿಕ ನಡೆದ ಹ್ರಸ್ವ ಸಮಾರಂಭದಲ್ಲಿ ಡಾ.ಝೈನೀ ಕಾಮಿಲ್ ಸಂದೇಶ ಭಾಷಣ ಮಾಡಿದರು. ರಾಜ್ಯ ಕಾರ್ಯದರ್ಶಿ ಹನೀಫ್ ಹಾಜಿ ಉಳ್ಳಾಲ, ಕೆ.ಎಂ.ಸಿದ್ದೀಖ್ ಮೋಂಟುಗೋಳಿ ಶುಭ ಹಾರೈಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ಸ್ವಾಗತಿಸಿ ಸಯ್ಯಿದ್ ಜಲಾಲುದ್ದೀನ್ ತಂಙಳ್ ಉಳ್ಳಾಲ್ ಧನ್ಯವಾದ ಹೇಳಿದರು
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ