ರಿಯಾದ್: ವಿದೇಶಿ ಉಮ್ರಾ ಯಾತ್ರಿಕರ ಸಮಗ್ರ ವಿಮಾ (Comprehensive Insurance) ವೆಚ್ಚದಲ್ಲಿ 63 ಪ್ರತಿಶತಕ ಕಡಿತವು ಜಾರಿಗೆ ಬಂದಿದೆ ಎಂದು ಹಜ್ ಮತ್ತು ಉಮ್ರಾ ಸಚಿವಾಲಯ(Saudi Ministry of Hajj and Umrah) ಪ್ರಕಟಿಸಿದೆ.
ಹಜ್ ಮತ್ತು ಉಮ್ರಾ ಸಚಿವಾಲಯವು ಜನವರಿ 10 ರಿಂದ ಜಾರಿಗೆ ಬರುವಂತೆ ಸೌದಿ ರಿಯಾಲ್ SR235 ($62) ನಿಂದ SR87 ಗೆ ವೆಚ್ಚವನ್ನು ಕಡಿತಗೊಳಿಸಿದೆ. ಉಮ್ರಾ ವೀಸಾದ ಆರಂಭಿಕ ಕಾರ್ಯವಿಧಾನಗಳಲ್ಲಿ ಇದನ್ನು ಒಳಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವಿಮಾ ಪ್ಯಾಕೇಜ್ನಲ್ಲಿ ಚಿಕಿತ್ಸೆ, ಆಸ್ಪತ್ರೆ ಪ್ರವೇಶ, ಗರ್ಭಧಾರಣೆಯ ಚಿಕಿತ್ಸೆ, ತುರ್ತು ಹೆರಿಗೆ, ಅಗತ್ಯ ದಂತ ಚಿಕಿತ್ಸೆ, ವಾಹನ ಅಪಘಾತ ಸಂಬಂಧಿತ ಗಾಯಗಳು, ಡಯಾಲಿಸಿಸ್ ಮತ್ತು ವೈದ್ಯಕೀಯ ಸಾರಿಗೆಯಂತಹ(Medical Transportation) ತುರ್ತು ಪರಿಸ್ಥಿತಿಗಳನ್ನು ಒಳಗೊಂಡಿದೆ.
ಯಾತ್ರಿಕರು ಸೌದಿ ಅರೇಬಿಯಾಕ್ಕೆ ಆಗಮಿಸಿದ ನಂತರ ಅಪಘಾತ ಅಥವಾ ಇನ್ನಿತರ ಕಾರಣಗಳಿಂದ ಆಕಸ್ಮಿಕವಾಗಿ ಶಾಶ್ವತ ಅಂಗವೈಕಲ್ಯ, ನೈಸರ್ಗಿಕ ವಿಕೋಪಗಳಿಂದ ಮರಣ, ಮೃತರ ದೇಹವನ್ನು ಸ್ವದೇಶಕ್ಕೆ ಹಿಂದಿರುಗಿಸುವುದು ಮತ್ತು ನ್ಯಾಯಾಲಯದ ಆದೇಶದ ದಿಯಾಧನ (BLOOD MONEY ) ಮುಂತಾದ ಸಾಮಾನ್ಯ ಪ್ರಕರಣಗಳನ್ನೂ ವಿಮೆ ಒಳಗೊಂಡಿದೆ. ವಿಮಾನ ವಿಳಂಬ ಪರಿಹಾರ ಮತ್ತು ಫ್ಲೈಟ್ ರದ್ದತಿ ಪರಿಹಾರವು ಪ್ಯಾಕೇಜ್ನಲ್ಲಿ ಒಳಗೊಂಡಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?