ನವದೆಹಲಿ: ಯುಎಇಯ ರಾಜಮನೆತನದ ಕಚೇರಿ ಅಧಿಕಾರಿಯಂತೆ ನಟಿಸಿ ದೆಹಲಿಯ ಲೀಲಾ ಪ್ಯಾಲೇಸ್ ಪಂಚತಾರಾ ಹೋಟೆಲ್‌ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು, ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ, ಆರೋಪಿಯನ್ನು 41 ವರ್ಷ ಪ್ರಾಯದ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹೊಟೇಲ್‌ಗೆ ಆಗಮಿಸಿದ ಈತ ನವಂಬರ್ ಅಂತ್ಯದವರೆಗೂ ಅಲ್ಲೇ ಇದ್ದ. ಇದಾದ ನಂತರ ನವಂಬರ್‌ನಲ್ಲಿ ಅಲ್ಲಿ ರೂಮ್ ಖಾಲಿ ಮಾಡಿದ ಆರೋಪಿ ಈ ವೇಳೆ 20 ಲಕ್ಷ ಬಿಲ್‌ಗೆ ಚೆಕ್ ನೀಡಿದ್ದ. ಆದರೆ, ಚೆಕ್ ಬೌನ್ಸ್ ಆಗಿದೆ ಎಂದು ತಿಳಿದು ಬಂದಿದೆ.ಹೋಟೆಲ್‌ಗೆ ನಂಬಿಸಲು ಆರಂಭದಲ್ಲಿ ಮಹಮ್ಮದ್ ಶರೀಫ್ 1.5 ಲಕ್ಷ ಹಣ ಪಾವತಿಸಿದ್ದ. ಆದರೆ, ಬಾಕಿ 23 ಲಕ್ಷ ಪಾವತಿಸದೇ ಪರಾರಿಯಾಗಿದ್ದ.
ಈ ಘಟನೆಯ ನಂತರ ಹೊಟೇಲ್ ಮ್ಯಾನೇಜರ್ ಅನುಪಮ ದಾಸ್ ಗುಪ್ತಾ ಅವರು ಜನವರಿ 14 ರಂದು ದೆಹಲಿಯ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನಾಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.ಮಹಮ್ಮದ್ ಶರೀಫ್ ಯುಎಇ ಸುಲ್ತಾನ್ ಶೈಖ್ ಫಲ್ಹಾ ಬಿನ್ ಝಾಯಿದ್ ಆಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಳಿಕ ಈತನ ಬಂಧನಕ್ಕೆ ಬಲೆ ಬೀಸಿದ ದೆಹಲಿ ಪೊಲೀಸರು ತಂಡವೊಂದನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ನಂತರ ಜನವರಿ 19 ರಂದು ಶರೀಫ್‌ನನ್ನು (Mahamed Sharif) ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್