ಮಂಗಳೂರು: ವಿ.ಎಚ್.ಪಿ ಪ್ರೇರಿತ ತುತ್ತೂರಿ ಸೇವಕ ಶರಣ್ ಪಂಪ್ವೆಲ್ ಮೂಲಕ, ಮುಂದಿನ ತನ್ನ ರಾಜಕೀಯ ಅಸ್ತಿತ್ವದ ಬೆಳವಣಿಗೆಗಳನ್ನು ಗುರಿಯಾಗಿಸಿ,ಬಜರಂಗದಳ ‘ಶೌರ್ಯ ಯಾತ್ರೆ’ ಹೆಸರಿನಲ್ಲಿ ಕರ್ನಾಟಕದಾದ್ಯಂತ ಮತೀಯ ಪ್ರಚೋದನೆಯನ್ನು ಸೃಷ್ಟಿಸುವ ಹುನ್ನಾರದಿಂದ ಪ್ರಚೋದನಕಾರಿ ಹೇಳಿಕೆಗಳಿಗೆ ನಾಂದಿ ಹಾಡಲಾಗುತ್ತಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅದರ ಭಾಗವಾಗಿ ಗುಜರಾತಿನ ಮುಸ್ಲಿಮರ ಹತ್ಯೆ, ಸುರತ್ಕಲ್ ಫಾಝಿಲ್ ಹತ್ಯೆ, ತುಮಕೂರಿನಲ್ಲಿ ಸಂಭಾವ್ಯ ಗಲಭೆಗೆ ಪ್ರಚೋದನೆ, ಒಬ್ಬನನ್ನು ಮುಟ್ಟಿದರೆ ಹತ್ತು ಜನ ಆಸ್ಪತ್ರೆಯಲ್ಲಿ ಇರುತ್ತಾರೆ ಎಂಬ ಸಂಭಾವ್ಯ ಹಲ್ಲೆಗೆ ಪ್ರಚೋದನೆ, ‘ ನಮ್ಮ ಕೈಯಲ್ಲಿ ತಲವಾರು ಇರುತ್ತದೆ ‘ ಎಂಬ ಹೇಳಿಕೆಯಿಂದ ಅಪರಾಧಕ್ಕೆ ಪ್ರೇರಣೆ ಹೊಂದುವಂತಹ ಹೇಳಿಕೆಯನ್ನು ಸಾರ್ವಜನಿಕವಾಗಿ ಮತ್ತು ಮುಕ್ತವಾಗಿ ಕಾನೂನಿನ ಏಜೆಂಟ್ಗಳ ಸಮಕ್ಷಮವೇ ನೀಡಿರುತ್ತಾರೆ.
ಶರಣ್ ಎಂಬ ವಿ.ಎಚ್.ಪಿ ಏಜೆಂಟ್ ನ ಮುಖಾಂತರ ಕರ್ನಾಟಕದಾದ್ಯಂತ ಈ ರೀತಿಯಲ್ಲಿ ಗಲಭೆಗೆ ಮುನ್ನುಡಿ ಬರೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಗಲಭೆ ಸ್ಫೋಟ ಗೊಂಡರೆ ಅದಕ್ಕೆ ಮುಖ್ಯ ಕಾರಣ ಈ ಹೇಳಿಕೆಗಳಿಂದಲೇ ಎಂಬುದನ್ನು ವಿವೇಚಿಸಿ ಪೊಲೀಸರು ತಕ್ಷಣ ಪ್ರಕರಣ ದಾಖಲಿಸ ಬೇಕಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಶರಣ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಮ್ ಒಕ್ಕೂಟ ಆಗ್ರಹಿಸುತ್ತಿದೆ. ಇಲ್ಲದಿದ್ದಲ್ಲಿ ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗಲಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಶರಣ್ ಪಂಪ್ವೆಲ್, ಗುಜರಾತಿನ 59 ಕರಸೇವಕರ ಹತ್ಯೆಯ ಪ್ರತೀಕಾರಕ್ಕೆ 2 ಸಾವಿರ ಜನರ ಹತ್ಯೆ ಹಿಂದೂಗಳು ನಪುಂಸಕರಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. ಇದು ಹಿಂದೂಗಳ ಪರಾಕ್ರಮ.
ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶರಣ್, ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಆದರೆ ನಾವು ಹಿಂದೂ ಬಲಿದಾನ ನೋಡಿ ಸುಮ್ಮನೇ ಕೂರಲಿಲ್ಲ, ಸುರತ್ಕಲ್‌ಗೆ ಹೋಗಿ ನುಗ್ಗಿ ಮುಸ್ಲಿಂ ಯುವಕನ ಕೊಲೆ ಮಾಡಿದ್ದೇವೆ. ಇದರ ವಿಡಿಯೋವನ್ನು ನೀವೆಲ್ಲ ನೋಡಿದ್ದೀರಾ..? ಎಂದು ಹೇಳುವ ಮೂಲಕ ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿದೆ ಎಂಬ ವಿಚಾರವನ್ನು ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್