ಬೆಂಗಳೂರು: ಪಿಯು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವುದು ತಡವಾಗುವುದರಿಂದ ಜೂನ್ವರೆಗೂ ಹಳೆಯ ಬಸ್ ಪಾಸ್ ನಲ್ಲಿ ಉಚಿತ ಪ್ರಯಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುವು ಮಾಡಿಕೊಟ್ಟಿದೆ.
2017–18ನೇ ಸಾಲಿನಲ್ಲಿ ಪ್ರಥಮ ಪಿಯುಸಿ ವೇಳೆ ಪಾಸ್ ಪಡೆದಿರುವ ವಿದ್ಯಾರ್ಥಿಗಳು, ಈ ಸಾಲಿನ ಪಾಸ್ ವಿತರಿಸುವವರೆಗೂ ಹಳೆಯ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
‘ಪ್ರತಿ ವರ್ಷ ಜೂನ್ ತಿಂಗಳಲ್ಲಿ ನೂತನ ಶೈಕ್ಷಣಿಕ ವರ್ಷದ ಬಸ್ ಪಾಸ್ ವಿತರಿಸುತ್ತೇವೆ. ಆದರೆ, ಈ ಬಾರಿ ದ್ವಿತೀಯ ಪಿಯು ತರಗತಿಗಳು ಮುಂಚಿತವಾಗಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ’ ಎಂದಿದೆ.
ಸಮಯ ಬದಲು: ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಮೇ ತಿಂಗಳಲ್ಲಿ ಕಾಲೇಜಿನ ವೇಳೆಯನ್ನು ಬೆಳಿಗ್ಗೆ 8 ರಿಂದ 11ರವರೆಗೆ ಬದಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ