ಬೆಂಗಳೂರು,ಫೆ.22: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ವರದಿಯಾಗಿದೆ.
ರಾಯಚೂರು ಮೂಲದ ಒಂದೇ ಕುಟುಂಬದ ಶಫೀದ್ ಹುಸೈನ್ ಸುಲ್ಲದ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಹಾಗೂ ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಮೈನುದ್ದೀನ್ ಸಾಹೇಬ್, ಸೇಡಂನ ಬೇಗಮ್ ಮುಹಮ್ಮದ್ ಅಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇವರು ಸಾಲಿಹೀನ್ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಮೂಲಕ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಬಸ್ ಮಕ್ಕಾದಿಂದ 250 ಕಿ.ಮೀ.ದೂರದಲ್ಲಿ ಮುಂದೆ ಚಲಿಸುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ