ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ ಹೀನಾಯ ಸೋಲು ಕಂಡಿದ್ದು, 65 ಸ್ಥಾನಕ್ಕೆ ಸೀಮಿತವಾಗಿದೆ. ಕಾಂಗ್ರೆಸ್ 136 ಕ್ಷೇತ್ರಗಳನ್ನು ಗೆದ್ದಿದ್ದು, ಜೆಡಿಎಸ್ 19, ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳ ನಡುವಿನ ಭಾರಿ ಹಣಾಹಣಿ, ಅಬ್ಬರದ ಪ್ರಚಾರ, ಪ್ರತಿಷ್ಠೆಯನ್ನೇ ಪಣವಾಗಿಟ್ಟು ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 3.67 ಕೋಟಿ ಮತದಾರರು ನೀಡಿರುವ ಜನಾದೇಶ ಬಹಿರಂಗವಾಗಿದೆ. ಈ ಮೂರು ಪಕ್ಷಗಳ ಜೊತೆಗೇ ಎಎಪಿ, ಬಿಎಸ್ ಪಿ ಮತ್ತು ನಟ ಉುಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ತಮ್ಮ ಅದೃಷ್ಟಪರೀಕ್ಷೆಗೆ ನಿಂತಿದ್ದಾರೆ.
ಪ್ರಮುಖವಾಗಿ ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗ ನಡೆದಿರುವ ಈ ಚುನಾವಣೆಯ ಫಲಿತಾಂಶ ರಾಜ್ಯ ಮಾತ್ರವಲ್ಲ, ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ, ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.
ವಿಧಾನಸಭೆಯ 224 ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಬುಧವಾರ (ಏಪ್ರಿಲ್ 10) ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದರು. 2,615 ಅಭ್ಯರ್ಥಿಗಳು ಕಣದಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್