janadhvani

Kannada Online News Paper

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಕೇಸರೀಕರಣಗೊಂಡ ಪಠ್ಯಗಳ ಪರಿಷ್ಕರಣೆಗೆ ನಿರ್ಧಾರ

ಬೆಂಗಳೂರು:ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯಪುಸ್ತಕಗಳ ಪರಿಷ್ಕರಣೆ ಸೇರಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ವಿರೋಧಿ ಕಾನೂನನ್ನು ಬದಲಾಯಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.

ಇನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಿ ಸರ್ಕಾರ ನಿರ್ಧರಿಸಿದೆ.

ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಮೊದಲು ಸಿದ್ದರಾಮಯ್ಯ ಸರಕಾರ ಜಾರಿಗೆ ಬಂದಾಗ ಬಿಜೆಪಿ ಅವಧಿಯಲ್ಲಿ ತೆಗೆದುಕೊಂಡ ಕೆಲ ಕಾಯ್ದೆ ರದ್ದು ಮಾಡುವುದಾಗಿ ಹೇಳಿತ್ತು.ಅದರಂತೆ ಸರಕಾರ ಹೆಜ್ಜೆ ಇಡಲು ಮುಂದಾಗಿದೆ.

error: Content is protected !! Not allowed copy content from janadhvani.com