janadhvani

Kannada Online News Paper

ದ್ವೇಷ ರಾಜಕಾರಣಕ್ಕೆ ಬಲಿ: 6 ಯುವಕರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ವಿತರಣೆ

ಆರು ಮಂದಿ ಯುವಕರ ಮನೆಯವರಿಗೆ ಸರಕಾರಿ ಕೆಲಸ

ಬೆಂಗಳೂರು: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದರು.

ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್‌, ಮಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ದೀಪಕ್‌ ರಾವ್‌ ಮತ್ತು ಮಂಡ್ಯದ ಇದ್ರಿಷ್ ಪಾಷಾ ನರಗುಂದದ ಶಮೀರ್ ಕುಟುಂಬದವರಿಗೆ ಪರಿಹಾರ ವಿತರಿಸಿದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಉದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

ಸರ್ಕಾರದ ಅವಧಿಯಲ್ಲಿ ಕೋಮುಗಲಭೆಗಳಿಗೆ ಬಲಿಯಾದ ಆರು ಯುವಕರ ಪರವಾಗಿ ಇಂದು ಅವರ ಕುಟುಂಬ ವರ್ಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪರಿಹಾರದ ಚೆಕ್ ಗಳನ್ನು ಸ್ವೀಕರಿಸಿದರು.

ಆರು ಮಂದಿ ಯುವಕರ ಮನೆಯವರಿಗೆ ಸರಕಾರಿ ಕೆಲಸ

ಬೆಂಗಳೂರು: ದ್ವೇಷದ ರಾಜಕಾರಣದಿಂದಾಗಿ ಕೊಲೆಗೀಡಾಗಿದ್ದ ಆರು ಮಂದಿ ಯುವಕರ ಮನೆಯವರಿಗೆ ಸರಕಾರಿ ಕೆಲಸ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಮಸೂದ್, ಮಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್ ಹಾಗೂ ಮಂಡ್ಯದ ಇದ್ದೀಸ್ ಪಾಶಾ, ನರಗುಂದದ ಶಮೀರ್ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಘೋಷಣೆಯನ್ನು ಮಾಡಿದ್ದಾರೆ.

error: Content is protected !! Not allowed copy content from janadhvani.com