ಜಿದ್ದಾ: ಸೌದಿ ಅರೇಬಿಯಾದಲ್ಲಿ ವಲಸಿಗರಿಗೆ ಜೀವನ ಮಟ್ಟವನ್ನು ಸುಧಾರಿಸಲು ವಿಫುಲ ಯೋಜನೆ ಜಾರಿಗೆ ಬರಲಿದೆ. ಮಹಮ್ಮದ್ ಬಿನ್ ಸಲ್ಮಾನ್ ರಾಜಕುಮಾರನ ಅಧ್ಯಕ್ಷತೆಯಲ್ಲಿ ನಡೆದ ಸಭೆಯು, ವಿದೇಶಿಗಳಿಗೆ ಹೆಚ್ಚಿನ ಸೇವೆಗಳನ್ನು ಒದಗಿಸಲು ವಿಶೇಷ ಕಾರ್ಡ್ ಜಾರಿಗೆ ತರಲು ನಿರ್ಣಯಿಸಿದೆ.ಕಿರೀಟಾಧಿಕಾರಿ, ರಕ್ಷಣಾ ಮಂತ್ರಿ ಮಹಮ್ಮದ್ ಬಿನ್ ಸಲ್ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಈ ಮಹತ್ವಪೂರ್ಣ ನಿರ್ಣಯ ಕೈಗೊಳ್ಳಲಾಗಿದೆ.
ವಿದೇಶೀಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಲಭ್ಯವಾಗಿಸುವುದು, ವಿದೇಶಿ ಪ್ರಜೆಗಳ ಮಕ್ಕಳ ಶಿಕ್ಷಣಕ್ಕಾಗಿ ಉನ್ನತ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಮತ್ತು ಇತರ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಮುಂತಾದವುಗಳು ಹೊಸ ಯೋಜನೆಯಲ್ಲಿದೆ.
ವಿದೇಶಿಯರು ತಮ್ಮ ಸಾಂಸ್ಕೃತಿಕ ಮೌಲ್ಯಗಳನ್ನು ದೇಶೀಯರೊಂದಿಗೆ ಪರಸ್ಪರ ಹಂಚಿಕೊಳ್ಳಲು ಅವಕಾಶಗಳು ಲಭ್ಯವಾಗಲಿದೆ.ಜೊತೆಗೆ, ಜೀವನ ನಿರ್ವಹಣೆ, ನಗರಾಭಿವೃದ್ಧಿ, ಆಧುನೀಕರಣ, ವಾಸ ಸೌಕರ್ಯಗಳು, ಪ್ರಯಾಣ, ಕ್ರೀಡೆ, ಮನರಂಜನೆ ಮತ್ತು ಶಿಕ್ಷಣದ ಗುಣಮಟ್ಟವನ್ನು ನವೀಕರಿಸಲು 130 ಶತಕೋಟಿ ರಿಯಾಲ್ ಗಳನ್ನು ಖರ್ಚು ಮಾಡಲಾಗುವುದು.ಅಂತಾರಾಷ್ಟ್ರೀಯ ಗುಣಮಟ್ಟದ ವಾಸ ಸ್ಥಳ, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದಂತಹ ವಿವಿಧ ಸೇವೆಗಳು ಮೂಲ ನಿವಾಸಿಗಳ ಜೊತೆಗೆ ವಿದೇಶಿಗಳಿಗೂ ಲಭ್ಯವಾಗಲಿವೆ.
ವಿವಿಧ ಇಲಾಖೆಗಳಿಂದ ಹೆಚ್ಚಿನ ಸೇವೆಗಳನ್ನು ಒದಗಿಸಲು ವಿದೇಶಿಗಳಿಗೆ ವಿಶೇಷ ಕಾರ್ಡುಗಳನ್ನು ಅನುಮತಿಸಲು ಪ್ರಿನ್ಸ್ ಸಲ್ಮಾನ್ ಅಧ್ಯಕ್ಷತೆಯಲ್ಲಿ ಸೇರಿದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ