ಶಾರ್ಜಾ: ಏರ್ ಅರೇಬಿಯಾ ಪ್ರಯಾಣಿಕರಿಗಾಗಿ ಶಾರ್ಜಾದಲ್ಲಿ ಹೊಸ ಸಿಟಿ ಚೆಕ್-ಇನ್ ವ್ಯವಸ್ಥೆಯನ್ನು ಪ್ರಾರಂಭಿಸಿದೆ.ಇಂದಿನಿಂದ ಅಲ್ ಮುಸಲ್ಲಾ ದ ಮತಾಜಿರ್ ಶಾಪಿಂಗ್ ಸೆಂಟರ್ ನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಲಗೇಜ್ ನೀಡಿ ಬೋರ್ಡಿಂಗ್ ಪಾಸ್ ಪಡೆದುಕೊಳ್ಳುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಇದು, ಶಾರ್ಜಾದಲ್ಲಿ ಏರ್ ಅರೇಬಿಯಾ ಪರಿಚಯಿಸಿದ ಮೂರನೇ ಸಿಟಿ ಚೆಕ್-ಇನ್ ವ್ಯವಸ್ಥೆಯಾಗಿದೆ.ಇಲ್ಲಿ ಬೆಳಗ್ಗೆ 10ರಿಂದ ರಾತ್ರಿ 11ರವರೆಗೆ ಪ್ರಯಾಣಿಕರು ಲಗೇಜ್ ನೀಡಿ ಬೋರ್ಡಿಂಗ್ ಪಾಸ್ ಪಡೆಯಬಹುದು. ವಿಮಾನ ನಿಲ್ದಾಣಕ್ಕೆ ಪ್ರಯಾಣವನ್ನು ಸುಲಭಗೊಳಿಸಲು ಮತ್ತು ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ಗಳಲ್ಲಿನ ದೀರ್ಘ ಸರತಿ ಸಾಲುಗಳನ್ನು ತಪ್ಪಿಸಲು ಸಿಟಿ ಚೆಕ್-ಇನ್ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ.
ವಿಮಾನ ಹೊರಡುವ 24 ಗಂಟೆಗಳಿಂದ ಎಂಟು ಗಂಟೆಗಳ ಮೊದಲು ಚೆಕ್-ಇನ್ ಪ್ರಕ್ರಿಯೆಯನ್ನು ಇಲ್ಲಿ ಪೂರ್ಣಗೊಳಿಸಬಹುದು. ಶಾರ್ಜಾದಲ್ಲಿ, ಸಫೀರ್ ಮಾಲ್ನಲ್ಲಿ ಮತ್ತು ಮುವೈಲಾ ಅಲ್ ಮದೀನಾ ಶಾಪಿಂಗ್ ಸೆಂಟರ್ ಎದುರು ಈಗಾಗಲೇ ಸಿಟಿ ಚೆಕ್-ಇನ್ ವ್ಯವಸ್ಥೆ ಆರಂಭಿಸಲಾಗಿದೆ. ಅಜ್ಮಾನ್, ಅಲ್ ಐನ್ ಮತ್ತು ರಾಸ್ ಅಲ್ ಖೈಮಾದಲ್ಲೂ ಇದೇ ರೀತಿಯ ಸಿಟಿ ಚೆಕ್ ಇನ್ ಸೌಲಭ್ಯವನ್ನು ಸ್ಥಾಪಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ