ರಿಯಾದ್: ಜಿದ್ದಾದಲ್ಲಿರುವ ಅಮೆರಿಕನ್ ಕಾನ್ಸುಲೇಟ್ ಎದುರು ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕಾನ್ಸುಲೇಟ್ ಕಟ್ಟಡದ ಬಳಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊರಬಂದು ಬಂದೂಕಿನಿಂದ ಕಾನ್ಸುಲೇಟ್‌ನತ್ತ ಗುಂಡು ಹಾರಿಸಿದ್ದಾನೆ.ಆತನನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವುದಾಗಿ ಸೌದಿ ಅರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ SPA ವರದಿ ಮಾಡಿದೆ.
ಬುಧವಾರ ಸಂಜೆ 6.45ಕ್ಕೆ ಗುಂಡಿನ ದಾಳಿ ನಡೆದಿದೆ. ಮೃತರಲ್ಲಿ ಒಬ್ಬರು ನೇಪಾಳಿ ಪ್ರಜೆಯಾಗಿದ್ದು, ಅವರು ಖಾಸಗಿ ಭದ್ರತಾ ಏಜೆನ್ಸಿಯ ಉದ್ಯೋಗಿಯಾಗಿದ್ದು, ಅಮೆರಿಕದ ಕಾನ್ಸುಲೇಟ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದರು.ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಬಳಿಕ ಮೃತಪಟ್ಟಿದ್ದರು. ಕಾರಿನಲ್ಲಿ ಬಂದಾತನ ಗುರುತು ಪತ್ತೆಯಾಗಿಲ್ಲ.
ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಯಾವುದೇ ಕಾನ್ಸುಲೇಟ್ ಸಿಬ್ಬಂದಿ ಅಥವಾ ಅಮೆರಿಕದ ನಾಗರಿಕರು ಗಾಯಗೊಂಡಿಲ್ಲ ಮತ್ತು ಘಟನೆಯ ನಂತರ ಕಾನ್ಸುಲೇಟ್ ಅನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಮಕ್ಕಾ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಕಾರಿನಲ್ಲಿ ಬಂದವನು ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿಯಾಗಿ ಗುಂಡು ಹಾರಿಸಿದ್ದು, ಅದು ಉಗ್ರನ ಸಾವಿಗೆ ಕಾರಣವಾಯಿತು ಎಂಬುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯುಎಸ್ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ಸೌದಿ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಹೇಳಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್