ಮಂಗಳೂರು: ಪ್ರಚೋದನಕಾರಿ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ ಕದಡುವ, ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದ್ವೇಷ ಹುಟ್ಟುವಂತಹ ವಾತಾವರಣ ಸೃಷ್ಟಿ ಮಾಡುವ ಬಜರಂಗದಳದ ರಘು ಸಕಲೇಶಪುರ ಅಂಥವರು ನಾಗರಿಕ ವಾಸಕ್ಕೆ ಯೋಗ್ಯರಲ್ಲ. ಅಂಥವರನ್ನು ಗಡೀಪಾರು ಮಾಡಬೇಕೂ ಎಂದು ದ. ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ರಘು, ಇತ್ತೀಚೆಗೆ ಸಕಲೇಶಪುರ ತಾಲೂಕಿನಲ್ಲಿ ನಡೆದ ಸಂಘಟನೆಯ ಸಭೆಯೊಂದರಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ , ಅವಹೇಳನಕಾರಿಯಾಗಿ ಹಾಗೂ ಮುಸ್ಲಿಮರು ತರಕಾರಿ, ಮೀನು ಮಾರಾಟಕ್ಕೆ ಹಿಂದೂಗಳ ಮನೆಗೆ ಬಂದರೆ ಗುಂಡಿಕ್ಕಿ ಸಾಯಿಸಿ ಎಂಬಿತ್ಯಾದಿಯಾಗಿ ಹೇಳಿಕೆ ನೀಡಿ ಮತೀಯ ವಿದ್ವೇಶ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿರುತ್ತಾರೆ.
ರಘುವಿನಂತಹ ದುಷ್ಕರ್ಮಿಗಳು ಈ ಸಮಾಜದಲ್ಲಿ ಇರುವವರೆಗೂ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಸೃಷ್ಟಿಯಾಗುತ್ತಲೇ ಇರುತ್ತದೆ.
ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸು ಇಲಾಖೆ ಪ್ರಕರಣ ದಾಖಲಿಸಿ ರಘುನಂತವರನ್ನು ಗಡೀಪಾರು ಗೊಳಿಸಬೇಕು. ರಘು ನಂತವರು ಈ ನಾಗರಿಕ ಸಮಾಜದಲ್ಲಿ ವಾಸ ಇರಲು ಯೋಗ್ಯರಲ್ಲ ಮತ್ತು ಅರ್ಹರಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?