ಬೆಂಗಳೂರು: ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಪ್ರಯತ್ನಗಳು ನಡೆದಿವೆ. ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ” ಎಂದು ಹೆಸರು ಹೇಳಲು ಇಚ್ಚಿಸದೇ ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಎಳೆ ಹಿಡಿದು ಮಾತನಾಡಿದ್ದಾರೆ.
ಆರೋಗ್ಯ ತಪಾಸಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಹಲವು ಬಾರಿ ಸಿಂಗಾಪುರಕ್ಕೆ ಕುಮಾರಸ್ವಾಮಿ ಹೋಗಿದ್ದರು. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಕುಮಾರಸ್ವಾಮಿ ಸಿಂಗಾಪುರದಲ್ಲಿ ಇದ್ದಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಲುಗಾಡಿತ್ತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್