janadhvani

Kannada Online News Paper

ಭಾರಿ ಮಳೆ: ದ.ಕ.ಜಿಲ್ಲೆಯಲ್ಲಿ ಶಾಲೆ- ಕಾಲೇಜುಗಳಿಗೆ ಜುಲೈ 26 ರಂದು ರಜೆ

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿ ನಡೆಸಬಹುದು

ಮಂಗಳೂರು,ಜುಲೈ. 25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದವರೆಗೆ ಶಾಲೆ- ಕಾಲೇಜುಗಳಿಗೆ ಬುಧವಾರ (ಜುಲೈ 26) ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ

error: Content is protected !! Not allowed copy content from janadhvani.com