ರಿಯಾದ್/ ಕುವೈತ್ ಸಿಟಿ: ನವ ಮಾಧ್ಯಮದ ಯುಗದಲ್ಲಿ ಹೆಚ್ಚಿನ ಜನರು ‘ಹೃದಯವನ್ನು ಬೆರಳುಗಳಿಂದ ರವಾನಿಸುತ್ತಾರೆ’. ನೀವು ಈ ದೇಶಗಳಲ್ಲಿ ವಾಸಿಸುತ್ತಿದ್ದರೆ, WhatsApp ಚಾಟ್ಗಳಲ್ಲಿ ಸಂತೋಷ, ದುಃಖ, ಪ್ರೀತಿ ಮತ್ತು ಕೋಪವನ್ನು ವ್ಯಕ್ತಪಡಿಸಲು ಎಮೋಜಿಗಳನ್ನು ಬಳಸುವುದಾದಲ್ಲಿ ಇದನ್ನು ಗಮನಿಸಬೇಕಾಗಿದೆ.
ಸೌದಿ ಅರೇಬಿಯಾ ಮತ್ತು ಕುವೈತ್, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಹೃದಯದ ಎಮೋಜಿ ಕಳಿಸುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ವಾಟ್ಸಾಪ್ ಅಥವಾ ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಹುಡುಗಿಯರಿಗೆ ಹೃದಯದ ಎಮೋಜಿಗಳನ್ನು ಕಳುಹಿಸುವುದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಕುವೈತ್ ಘೋಷಿಸಿದೆ.
ಈ ಅಪರಾಧಕ್ಕಾಗಿ ಸಿಕ್ಕಿಬಿದ್ದವರು ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಗರಿಷ್ಠ 2,000 ಕುವೈತ್ ದಿನಾರ್ಗಳ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಕುವೈತ್ ವಕೀಲರನ್ನು ಉಲ್ಲೇಖಿಸಿ “ಗಲ್ಫ್ ನ್ಯೂಸ್” ವರದಿ ಮಾಡಿದೆ.
ಸೌದಿ ಅರೇಬಿಯಾ ಕೂಡ ಇದೇ ರೀತಿಯ ಎಚ್ಚರಿಕೆ ನೀಡಿದೆ. ವಾಟ್ಸಾಪ್ ಮೂಲಕ ಕೆಂಪು ಹೃದಯದ ಎಮೋಜಿಯನ್ನು ಕಳುಹಿಸುವುದು ಜೈಲು ಶಿಕ್ಷೆಗೆ ಕಾರಣವಾಗಬಹುದು. ಸೌದಿ ಕಾನೂನಿನ ಪ್ರಕಾರ, ಅಂತಹ ಅಪರಾಧಗಳಿಗೆ ಸಿಕ್ಕಿಬಿದ್ದವರಿಗೆ ಎರಡರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರಿಯಾಲ್ ದಂಡ ವಿಧಿಸಲಾಗುತ್ತದೆ.
ದೇಶದ ಅಧಿಕಾರ ವ್ಯಾಪ್ತಿಯಲ್ಲಿ ಇಂತಹ ಎಮೋಜಿಗಳನ್ನು ಕಳುಹಿಸುವುದು ಕಿರುಕುಳದ ವ್ಯಾಪ್ತಿಗೆ ಬರುತ್ತದೆ ಎಂದು ಸೌದಿ ಸೈಬರ್ ಕ್ರೈಮ್ ಇಲಾಖೆ ಸ್ಪಷ್ಟಪಡಿಸಿದೆ. ಅಂತಹ ಎಮೋಜಿಗಳನ್ನು ಪಡೆದ ಮಹಿಳೆಯರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಅಪರಾಧವನ್ನು ಪುನರಾವರ್ತಿಸಿದರೆ, 300,000 ರಿಯಾಲ್ಗಳವರೆಗೆ ದಂಡ ಮತ್ತು ಗರಿಷ್ಠ ಐದು ವರ್ಷಗಳ ಜೈಲು ಶಿಕ್ಷೆಗೆ ಕಾರಣವಾಗಲಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್