ಕೊಡಗು: ಸೆಪ್ಟೆಂಬರ್ 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ SSF 50ನೇ ವರ್ಷಾಚರಣೆ ಗೋಲ್ಡನ್ ಫಿಫ್ಟಿ ಐತಿಹಾಸಿಕ ಮಹಾ ಸಮ್ಮೇಳನದ ಪ್ರಚಾರಾರ್ಥ SSF ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಂದೇಶ ವಾಹನ ಜಾಥಾ ನಡೆಯಿತು.
ಜಿಲ್ಲಾದ್ಯಕ್ಷರಾದ ಝುಬೈರ್ ಸಅದಿ ಉಸ್ತಾದರ ಪ್ರಾರ್ಥನೆಯೊಂದಿಗೆ ಪೊನ್ನಂಪೇಟೆ ಪಟ್ಟಣದಿಂದ ಪ್ರಾರಂಭಗೊಂಡ ವಾಹನ ಜಾಥಾ ಗೋಣಿಕೊಪ್ಪ, ವಿರಾಜಪೇಟೆ, ಅಮ್ಮತ್ತಿ, ಪಾಲಿಬೆಟ್ಟ, ಸಿದ್ದಾಪುರ, ನೆಲ್ಯಹುದಿಕೇರಿ, ಕುಶಾಲನಗರ, ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ, ಮಾದಾಪುರ, ಸುಂಟಿಕೊಪ್ಪ, ಮಡಿಕೇರಿ, ಮೂರ್ನಾಡು, ಮಾರ್ಗವಾಗಿ ಬಂದ ವಾಹನ ಜಾಥಾ ನಾಪೋಕ್ಲುವಿನಲ್ಲಿ ಸಮಾಪ್ತಿಗೊಂಡಿತು.
ಈ ಎಲ್ಲಾ ಪಟ್ಟಣಗಳಲ್ಲಿಯೂ ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಮ್ಮೇಳನದ ಕುರಿತು ಭಾಷಣ ನಡೆಸಿದರು. ಭಾಷಣಗಾರರಾಗಿ… ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ, ವಿರಾಜಪೇಟೆ ಡಿವಿಷನ್ ಅದ್ಯಕ್ಷರಾದ ಕಮರುದ್ದೀನ್ ಅನ್ವಾರಿ ಅಹ್ಸನಿ ಮಡಿಕೇರಿ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ಲಾ ಹಿಮಮಿ ಸಖಾಫಿ, ಆಗಮಿಸಿದ್ದರು.
ಒಂದೊಂದು ಪಟ್ಟಣದಲ್ಲಿಯೂ ಆಲ್ಲಿನ ಕಾರ್ಯಕರ್ತರೂ ಸಾತ್ ನೀಡಿದರು.
ಗೋಲ್ಡನ್ ಫಿಫ್ಟಿ ಸಮ್ಮೇಳನದ ಯಶಸ್ವಿಗೆ ಸರ್ವರಿಗೂ ಕರೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ