ಮಂಗಳೂರು: ಮಂಗಳೂರಿನ ಮಹೇಶ್ ಮೋಟರ್ರ್ಸ್ ನ ಮಾಲಕ ಪ್ರಕಾಶ್ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್‌ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖ್ಯಾತ ಸಾರಿಗೆ ಉದ್ಯಮಿ, ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ‘ಮಹೇಶ್ ಮೋಟಾರ್ಸ್’ಗೆ ಸೇರಿದ ಅನೇಕ ಸಿಟಿ ಬಸ್ ಮತ್ತು ಜಿಲ್ಲಾ ಬಸ್‌ಗಳು ಪ್ರತಿದಿನವೂ ಸಂಚರಿಸುತ್ತಿದ್ದು, ಜನಪ್ರಿಯವಾಗಿದೆ.
ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಕದ್ರಿ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತಾಪ
ಪ್ರಕಾಶ್ ಶೇಖ ಅವರ ನಿಧನಕ್ಕೆ ಸಿಟಿಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್‌ರಾಜ್ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ