ರಿಯಾದ್: ಇಸ್ರೇಲ್-ಹಮಾಸ್ ಕದನ ತೀವ್ರಗೊಂಡಿದ್ದು, ಪ್ರದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಅರಬ್ ದೇಶಗಳು ತೀವ್ರ ಶ್ರಮ ಮುಂದುವರಿಸಿದೆ.
ಇಸ್ರೇಲ್ ಮೇಲೆ ಹಮಾಸ್ ಹೋರಾಟಗಾರರು ನಡೆಸಿರುವ ದಾಳಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್, ತಮ್ಮ ದೇಶವು ಫೆಲೆಸ್ತೀನಿ ಜನರೊಂದಿಗೆ ನಿಲ್ಲುವುದಾಗಿ ಹೇಳಿದ್ದಾರೆ. ಅದೇ ಸಮಯ ಈ ಸಂಘರ್ಷ ಇನ್ನಷ್ಟು ವ್ಯಾಪಿಸದಂತೆ ತಾವು ಶ್ರಮಿಸುತ್ತಿರುವುದಾಗಿ ಅವರು ಫೆಲೆಸ್ತೀನಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ಹೇಳಿದ್ದಾಗಿ ತಿಳಿಸಿದ್ದಾರೆ.
ಉತ್ತಮ ಜೀವನ ನಡೆಸುವ ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಹಾಗೂ ಶಾಂತಿಗಾಗಿ ಫೆಲೆಸ್ತೀನಿ ಜನರ ಕಾನೂನುಬದ್ಧ ಹಕ್ಕುಗಳಿಗಾಗಿ ಅವರ ಜೊತೆಗೆ ಸೌದಿ ಅರೇಬಿಯಾ ನಿಲ್ಲುವುದಾಗಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಹೇಳಿದರು. ಇದರೊಂದಿಗೆ, ಸೌದಿ ಅರೇಬಿಯಾ ಇಸ್ರೇಲ್ಗೆ ಬೆಂಬಲ ಘೋಷಿಸಿದೆ ಎಂಬ ಸುಳ್ಳು ಸುದ್ದಿಯನ್ನು ಬಿತ್ತರಿಸಿದ ಮಾಧ್ಯಮಗಳು ಮುಖಭಂಗಕ್ಕೀಡಾಗಿದೆ.
ಫೆಲೆಸ್ತೀನಿ ವಿಚಾರವು ಸೌದಿ ಅರೇಬಿಯಾಗೆ ಬಹಳ ಮುಖ್ಯವಾಗಿದೆ ಎಂದು ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮಾತನಾಡಿದ ಮುಹಮ್ಮದ್ ಬಿನ್ ಸಲ್ಮಾನ್,ಹೇಳಿದ್ದರು. “ಆ ಸಮಸ್ಯೆ ಪರಿಹರಿಸಬೇಕಿದೆ, ಫೆಲೆಸ್ತೀನಿ ಜನರ ಜೀವನ ಸುಲಭಗೊಳಿಸಬೇಕಿದೆ,” ಎಂದು ಅವರು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್