ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಪ್ರಕರಣಗಳು ಅನಿಯಂತ್ರಿತವಾಗಿ ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 13,000 ದಾಟಿದ್ದು ಲಕ್ನೋ, ಮೊರಾದಾಬಾದ್, ಮೀರತ್, ಕಾನ್ಪುರ ಮತ್ತು ನೋಯ್ಡಾ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಅಷ್ಟುಮಾತ್ರವಲ್ಲದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 600 ಹೊಸ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಸ್ಥಳೀಯ ಆಸ್ಪತ್ರೆಗಳು ಅನೇಕ ಡೆಂಗ್ಯೂ ರೋಗಿಗಳನ್ನು ದಾಖಲಿಸಿಕೊಂಡಿವೆ ಮತ್ತು ಪ್ರತಿದಿನ ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿವೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೆ 24 ಕ್ಕೂ ಹೆಚ್ಚು ಮಂದಿ ಡೆಂಗ್ಯೂನಿಂದ ಮೃತಪಟ್ಟಿರುವುದಾಗಿ ವರದಿ ನೀಡಿದ್ದು ಆದರೆ ಖಾಸಗಿ ಆಸ್ಪತ್ರೆಗಳ ದತ್ತಾಂಶವನ್ನೂ ಸೇರಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗಿದೆ. ಹವಾಮಾನ ವೈಪರೀತ್ಯದಿಂದ ಮುಂದಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವ ಬ್ರಜೇಶ್ ಪಾಠಕ್ ಅವರು ಎಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಸೂಚನೆಗಳನ್ನು ನೀಡಿದ್ದಾರೆ. ಇದಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳಿಗೆ ಪ್ರತ್ಯೇಕ ವಾರ್ಡ್ಗಳನ್ನು ರಚಿಸುವಂತೆ ಹೇಳಿಕೊಂಡಿದ್ದಾರೆ.
ಲಕ್ನೋದಲ್ಲಿರುವ ಆಸ್ಪತ್ರೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಡೆಂಗ್ಯೂ ರೋಗಿಗಳಿಗೆ ಡಯಾಲಿಸಿಸ್ ಮತ್ತು ವೆಂಟಿಲೇಟರ್ ಬೆಂಬಲದ ಅಗತ್ಯವಿದೆ. ಪ್ರಮುಖ ಆಸ್ಪತ್ರೆಗಳ ಎಲ್ಲಾ ಹಾಸಿಗೆಗಳು ಡೆಂಗ್ಯೂ ರೋಗಿಗಳಿಂದ ತುಂಬಿವೆ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್