ಕೊಚ್ಚಿ: ಕಲಮಶ್ಶೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಯೆಹೋವನ ಅಧಿವೇಶನ ನಡೆಯುತ್ತಿದ್ದ ಕಲಮಶ್ಶೇರಿ ನೆಸ್ಟ್ ಬಳಿಯ ಕನ್ವೆನ್ಷನ್ ಸೆಂಟರ್ನಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಮೂರ್ನಾಲ್ಕು ಸ್ಫೋಟಗಳು ಸಂಭವಿಸಿವೆ ಎಂದು ಸಭಾಂಗಣದಲ್ಲಿದ್ದವರು ಹೇಳಿದರು. ಮೃತರು ಹಾಗೂ ಗಾಯಾಳುಗಳನ್ನು ಕಲಮಶ್ಶೇರಿ ಸರಕಾರಿ ಪ.ಪೂ. ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. 2500 ಮಂದಿ ಕೂರಬಹುದಾದ ಸಭಾಂಗಣವಾಗಿದೆ ಇದು. ಸಭಾಂಗಣದ ಮಧ್ಯಭಾಗದಿಂದ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪ್ರಾರ್ಥನೆಯ ಸಮಯವಾದ್ದರಿಂದ ಎಲ್ಲರೂ ಕಣ್ಣು ಮುಚ್ಚಿ ನಿಂತಿದ್ದರು ಎನ್ನುತ್ತಾರೆ ಜನರು. ವರಾಪುಝ, ಅಂಗಮಾಲಿ, ಎಡಪಳ್ಳಿ ಹೀಗೆ ಹಲವೆಡೆಯಿಂದ ಜನರು ಸಮಾವೇಶ ಕೇಂದ್ರಕ್ಕೆ ತಲುಪಿದ್ದರು.
ಏತನ್ಮಧ್ಯೆ, ಸ್ಫೋಟಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್