ವಿಟ್ಲ : ಇಲ್ಲಿನ ಸಮುದಾಯ ಸರಕಾರಿ ಆಸ್ಪತ್ರೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಹಲವಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ನೂರಾರು ರೋಗಿಗಳು ದಿನನಿತ್ಯ ಬರುತ್ತಿದ್ದರೂ ಕೂಡ ಆಸ್ಪತ್ರೆಯಲ್ಲಿ ಸರಿಯಾದ ಸರ್ಜನ್ ಡಾಕ್ಟರ್, ಸಿಸೇರಿಯನ್ ವ್ಯವಸ್ಥೆ ಇಲ್ಲ.
ಇದನ್ನು ಸರಿಪಡಿಸುವ ಉದ್ದೇಶದಿಂದ, ಕಾರ್ಮಿಕ ರೈತ ಸಂಘ, ದ ಕ ಜಿಲ್ಲೆ ದಲಿತ ಸೇವಾ ಸಮಿತಿ ಮತ್ತು ಖಿದ್ಮತ್ ಫೌಂಡೇಶನ್ ವಿಟ್ಲ ವಲಯ ಇತ್ತೀಚೆಗೆ ಜಿಲ್ಲಾ ಆರೋಗ್ಯ ಇಲಾಖೆಗೆ ಮತ್ತು ಶಾಸಕರಿಗೆ ಮನವಿ ನೀಡಿತ್ತು.
ಇದಕ್ಕೆ ಸ್ಪಂದಿಸಿದ ಶಾಸಕರು ಇಂದು ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.