ಹಾಸನ:‘ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಮಾಧ್ಯಮಗಳ ಸೃಷ್ಟಿ. ಸಾಮಾಜಿಕ ಜಾಲತಾಣ, ಪತ್ರಿಕೆಯಲ್ಲಿ ಬರುವ ಲೇಖನ ಓದಿ ಮೆದುಳಿನಲ್ಲಿ ತುಂಬಿಕೊಂಡಿದ್ದೇನೆ. ಅದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ನೀಡುವೆ. ಮುಖ್ಯಮಂತ್ರಿ ಜವಾಬ್ದಾರಿ ನಿರ್ವಹಿಸಲು ಜವಾಬ್ದಾರಿ ನೀಡಿದ ಕಾಂಗ್ರೆಸ್ನ ವಿಶ್ವಾಸ ಪಡೆಯುವುದು ಮುಖ್ಯ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಕಾಂಗ್ರೆಸ್ , ಬಿಜೆಪಿ, ಶ್ರೀ ರಾಮುಲು ಸೇರಿದಂತೆ ಯಾರು ನನ್ನನ್ನು ನಿದ್ದೆ ಗೆಡಿಸಲು ಸಾಧ್ಯ ಇಲ್ಲ. ಬಿಜೆಪಿ ನಿದ್ದೆಗೆಡುವಂತೆ ನಾನು ಮಾಡುವೆ’ ಎಂದು ಕುಮಾರಸ್ವಾಮಿ ಹೇಳಿದರು.
ಹೊಳೆನರಸೀಪುರದ ಹೆಲಿಪ್ಯಾಡ್ನಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿಯೊಂದಿಗೆ ಬಂದ ಎಚ್ಡಿಕೆ ಅವರನ್ನು ಸಹೋದರ ಎಚ್.ಡಿ.ರೇವಣ್ಣ ಸ್ವಾಗತಿಸಿದರು.
‘ಇದು ತಾತ್ಕಾಲಿಕ ಸರ್ಕಾರ ಅಲ್ಲ. ಐದು ವರ್ಷ ಸುಭದ್ರ ಸರ್ಕಾರ ನೀಡುವೆ. ಜನರ ಭರವಸೆಗಳನ್ನು ಈಡೇರಿಸಲು ಪ್ರಯತ್ನ ಮಾಡುವೆ’ ಎಂದರು.
‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಬಿಎಸ್ಪಿ ನಾಯಕಿ ಮಾಯಾವತಿ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡುತ್ತೇನೆ’ ಅವರು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ