ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.
‘ಅಧಿಕಾರದಿಂದ ಬಿಜೆಪಿಯನ್ನು ದೂರವಿಡಲು ಕೈಜೋಡಿಸುವ ಬಗ್ಗೆ ಉಭಯ ಪಕ್ಷಗಳು ಪರಿಶೀಲನೆ ನಡೆಸುತ್ತಿವೆ’ ಎಂದು ಖರ್ಗೆ ತಿಳಿಸಿದರು.
‘ಕರ್ನಾಟಕದಲ್ಲಿನ ಗೆಲುವು (ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟಿದ್ದು) ಇಡೀ ದೇಶಕ್ಕೆ ಸಂದೇಶ ನೀಡಿದೆ. ಜಾತ್ಯತೀತ ಪಕ್ಷಗಳು ಕೈಜೋಡಿಸಲು ವೇದಿಕೆ ಕಲ್ಪಿಸಿದಂತಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ಜತೆಗೂಡಿ ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಉತ್ಸುಕರಾಗಿದ್ದಾರೆ. ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ಪ್ರಮುಖರಾದ ಮಾಯಾವತಿ, ಮಮತಾ ಬ್ಯಾನರ್ಜಿ, ಎನ್. ಚಂದ್ರಬಾಬು ನಾಯ್ಡು, ಕೆ. ಚಂದ್ರಶೇಖರ ರಾವ್ ಅವರಿಗೂ ಆಹ್ವಾನ ನೀಡಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.
ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಉಭಯ ಪಕ್ಷಗಳು ನಿರ್ಧರಿಸಿವೆ. ಈ ಮೂಲಕ ಮೂರೂ ಕ್ಷೇತ್ರಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದು ಈ ಪಕ್ಷಗಳ ಉದ್ದೇಶ. 2019ರ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡರೆ ಗರಿಷ್ಠ ಸ್ಥಾನಗಳನ್ನು ಗೆಲ್ಲಬಹುದು ಎಂಬುದು ಪಕ್ಷಗಳ ಆಲೋಚನೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ