ಮಂಗಳೂರು: ಎಸ್ವೈಎಸ್ ಕರ್ನಾಟಕ ಇದರ ಮೂವತ್ತನೇ ವಾರ್ಷಿಕ ಮಹಾ ಸಮ್ಮೇಳನವು 2024 ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಅದರ ಪ್ರಚಾರಾರ್ಥ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 14 (ನಾಳೆ) ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಯವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2-30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, 5 ತನಕ ಎಸ್ವೈಎಸ್ ಕಾರ್ಯಕರ್ತರಿಗೆ ವಿಶೇಷ ಸಾಂಘಿಕ ತರಗತಿ ನಡೆಯಲಿದೆ. ಸಂಜೆ 5 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸಂಘ ಕುಟುಂಬದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಜಲಾಲುದ್ದೀನ್ ಸಅದಿ ತಂಙಳ್ ಮಳ್ಹರ್, ಹಂಝ ಮಿಸ್ಬಾಹಿ ಓಟ್ಟಪಡವು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಹಫೀಳ್ ಸಅದಿ ಕೊಳಕೇರಿ, ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು ಮುಂತಾದವರು ನೇತೃತ್ವ ನೀಡಲಿದ್ದಾರೆಂದು ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ