ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಜುನೈದ್‌ರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಿಂದ 375 ಕಿ.ಮೀ ದೂರದಲ್ಲಿರುವ ಅಲ್ ಕಸ್ರಾದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

18/11/2023ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಸಹೋದ್ಯೋಗಿ ಮತ್ತು ಕುಟುಂಬಸ್ಥರಾದ ರಿಝ್ವಾನ್ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.

ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಸನಯ್ಯ ಸೆಕ್ಟರ್ ಶಿಕ್ಷಣ ಇಲಾಖೆ ಅಧ್ಯಕ್ಷರಾದ ಜಲಾಲುದ್ದೀನ್ ಸಅದಿ ಉಸ್ತಾದರ ನೇತೃತ್ವದಲ್ಲಿ ಕೆಸಿಎಫ್ ರಾಷ್ಟ್ರೀಯ ನೇತಾರರು ಝೋನ್ ನೇತಾರರು ಕಾರ್ಯಕರ್ತರು ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ