ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿ ಮುಹಮ್ಮದ್ ರಫೀಕ್‌ರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
22/11/2023ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಕುಟುಂಬಸ್ಥರಾದ ಅಸ್ಲಂ ಬ್ರಹ್ಮಾವರ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.
ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಬತ್ತಾ ಸೆಕ್ಟರ್ ಶಿಕ್ಷಣ ಇಲಾಖೆ ಅಧ್ಯಕ್ಷರಾದ ಅಬ್ದುಲ್ಲಾ ಮದನಿ ಉಸ್ತಾದರ ನೇತೃತ್ವದಲ್ಲಿ ಯೂಸುಫ್ ಹಾಜಿ ಕಳಂಜಿಬೈಲ್, ಹಂಝ ಮೈಂದಾಳ, ಅಝೀಝ್ ಮೂಡಿಗೆರೆ ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ